Homeಕರೋನಾ ತಲ್ಲಣಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

- Advertisement -
- Advertisement -

ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿದೆ. ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ರಪ್ತಿ ನದಿ ಸೇತುವೆಯ ಮೇಲೆ ನಡೆದಿದೆ ಎಂದು ಗುರುತಿಸಲಾಗಿದೆ.

ಮೇ 28 ರಂದು ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಸೇತುವೆಯ ಸಮೀಪ ರಸ್ತೆಯಲ್ಲಿ ಕಾರು ನಿಲ್ಲಿಸಿ ನಿಂತಿದ್ದ ಸ್ಥಳೀಯರೊಬ್ಬರು ಯುವಕರು ದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆ ದೇಶಾದ್ಯಂತ ಜನರಲ್ಲಿ ಸಾಕಷ್ಟು ಆಕ್ರೋಶವನ್ನು ಹುಟ್ಟಿಹಾಕಿತ್ತು. ಗಂಗಾ ನದಿಯ ತಟದಲ್ಲಿ ಜನರು ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆ ನಡೆಸುತ್ತಿರುವ ಮತ್ತು ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಘಟನೆಗಳು ದೇಶಾದ್ಯಂತ ಸಂಚಲನವನ್ನು ಉಂಟುಮಾಡಿತ್ತು. ನದಿಯಲ್ಲಿ ತೇಲಿ ಬರುತ್ತಿರುವ ಮೃತದೇಹಗಳ ಕಾರಣದಿಂದ ಸಾಕಷ್ಟು ಮುಜುಗರವನ್ನು ಎದುರಿಸಿದ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮೃತದೇಹಗಳನ್ನು ನದಿಗೆ ಎಸೆಯದಂತೆ ಜನರಲ್ಲಿ ಹಲವು ಬಾರಿ ಮನವಿಗಳನ್ನು ಕೂಡ ಮಾಡಿತ್ತು. ಜೊತೆಗೆ ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಈ ಎಲ್ಲ ಘಟನೆಗಳ ನಂತರವೂ ಉತ್ತರಪ್ರದೇಶದಲ್ಲಿ ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಅಮಾನವೀಯ ಕೃತ್ಯಗಳು ಮುಂದುವರೆಯುತ್ತಿರುವುದಕ್ಕೆ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಸಾಕ್ಷಿ ನೀಡಿದೆ.

ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಪ್ರಕರಣಕ್ಕೆ ಸಂಬಂಧ ಸೋಂಕಿತರ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ ಪಿಪಿಇ ಕಿಟ್‌ ಧರಿಸಿರುವ ವ್ಯಕ್ತಿಯೊಬ್ಬ ದೇಹವನ್ನು ಹಿಡಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ವ್ಯಕ್ತಿ ದೀರ್ಘಕಾಲದಿಂದ ದೇಹವನ್ನು ಬ್ಯಾಗ್‌ನಿಂದ ತೆಗೆಯಲು ಪ್ರಯತ್ನಿಸುತ್ತಿರುವಂತೆ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.

ಈ ಘಟನೆಯಲ್ಲಿ ಕಾಣಿಸಿರುವ ಮೃತ ದೇಹ ಸಿದ್ಧಾರ್ಥ ನಗರ ನಿವಾಸಿಯದಾಗಿದ್ದು ಅವರು ಮೇ 25 ರಂದು ಕೋವಿಡ್‌ ಸೋಂಕಿನಿಂದ ಬಲರಾಮಪುರ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ನಂತರ ಅಂದರೆ ಮೇ 28 ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಕೋವಿಡ್‌ ನಿಂದ ಮೃತಪಟ್ಟ ಕಾರಣ ಅವರ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆದಿರುವುದು ತಿಳಿದುಬಂದಿದೆ ಬಲರಾಮಪುರ ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ ಸಿದ್ದಾರ್ಥ್‌ ನಗರದ ವ್ಯಕ್ತಿಯೊಬ್ಬರು ಕಳೆದ ಮಂಗಳವಾರ ಕೋವಿಡ್‌ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳ ನಂತರ ಅಂದರೆ ಮೇ 28 ರ ವೇಳೆಗೆ ರೋಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೃತಪಟ್ಟ ವ್ಯಕ್ತಿಯ ದೇಹವನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅವರ ಕುಟುಂಬಸ್ಥರು ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಲರಾಮಪುರ ಜಿಲ್ಲೆ ಮುಖ್ಯ ಆರೋಗ್ಯಾಧಿಕಾರಿ ವಿ.ಬಿ. ಸಿಂಗ್‌ ತಿಳಿಸಿದ್ದಾರೆ.

ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿ ನೀಡಲಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಾಯ್ದೆ ಮತ್ತು ಎಪಿಡೆಮಿಕ್‌ ಖಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಲರಾಮಪುರ ಜಿಲ್ಲಾ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಟಿಯಾಲ್‌ ತಿಳಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ತಪ್ಪಾಗಿ ನೀಡುತ್ತಿದೆ ಎಂಬ ಆರೋಪ ಈಗಾಗಲೇ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬರುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈಗ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ನದಿಗೆ ಎಸೆಯುತ್ತಿರುವ ಘಟನೆಯ ಈ ದೃಶ್ಯಾವಳಿ ಉತ್ತರ ಪ್ರದೇಶದ ಕೊರೋನಾ ಕಾಲದ ಕರುಣಾ ಜನಕ ಕಥೆಗಳನ್ನು, ಕೋವಿಡ್‌ ಸೋಂಕಿನಿಂದ ಜನರು ಎದುರಿಸುತ್ತಿರುವ ಅಮಾನವೀಯ ವ್ಯಥೆಗಳನ್ನು ನಮ್ಮ ಮುಂದೆ ತೆರೆದಿಟ್ಟಿದೆ.


ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...