Homeಕರ್ನಾಟಕಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

- Advertisement -
- Advertisement -

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯವನ್ನು’ ಪ್ರಕಟಿಸದಂತೆ ವಿವಿಧ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿರುವ ಬೆಂಗಳೂರು ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅವಧಿಯ ಅರ್ಜಿ ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳು ಯಾವುದೇ ಅವಹೇಳನಕಾರಿ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿದ ಬೆಂಗಳೂರು ನಗರದ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು barandbench.com ವರದಿ ಹೇಳಿದೆ.

ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದ ಇತರ ಪ್ರಕರಣಗಳ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವು ಎಸ್‌ಐಟಿ ತನಿಖೆಗೆ ನೇರವಾಗಿ ಅಡ್ಡಿಪಡಿಸುತ್ತದೆ ಎಂದು ಥರ್ಡ್ ಐ ಯೂಟ್ಯೂಬ್ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅಲ್ಲದೆ, “ಇದು ವಾಕ್ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ” ಎಂದು ಅರ್ಜಿಯಲ್ಲಿ ಹೇಳಿದೆ ಎಂದು livelaw.in ವರದಿ ತಿಳಿಸಿದೆ.

ಮಾಧ್ಯಮಗಳಿಗೆ ತಡೆ ತಂಡ ಅರ್ಜಿದಾರರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಹೆಣಗಳನ್ನು ಹೂತು ಹಾಕಿದ ಪ್ರಕರಣದ ಎಫ್‌ಐಆರ್‌ನಲ್ಲಿ ತನ್ನ, ತನ್ನ ಕುಟುಂಬದ ಮತ್ತು ತಮಗೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ದ ಆರೋಪಗಳಿಲ್ಲ ಎಂದಿದ್ದಾರೆ. ಆದರೆ, ಎಫ್‌ಐಆರ್‌ನಲ್ಲಿ ಎರಡು ದೂರುಗಳನ್ನು ಸೇರಿಸಲಾಗಿದೆ. ಇವು ದೇವಾಲಯದ ಆಡಳಿತದ ವಿರುದ್ದ ಆರೋಪ ಹೊರಿಸಿವೆ ಮತ್ತು ಅರ್ಜಿದಾರರನ್ನು ಹೆಸರಿಸಿವೆ ಎಂದು ಥರ್ಡ್ ಐ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ವಿವರಿಸಿದೆ.

ಅರ್ಜಿದಾರರು 8,842 ಯುಆರ್‌ಎಲ್‌ಗಳನ್ನು ಅಳಿಸಲು ಕೋರಿದ್ದರು. ಬೆಂಗಳೂರು ನ್ಯಾಯಾಲಯವು ಅವರು ಅರ್ಜಿ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಕಡ್ಡಾಯವಾಗಿ ಯುಆರ್‌ಎಲ್‌ಗಳನ್ನು ಡಿಲಿಟ್ ಮಾಡುವಂತೆ ‘ಗ್ಯಾಗ್ ಆರ್ಡರ್’ ನೀಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜುಲೈ 18ರಂದು ಆದೇಶ ನೀಡಿದ್ದು, ಹರ್ಷೇಂದ್ರ ಕುಮಾರ್, ಅವರ ಕುಟುಂಬ ಸದಸ್ಯರು, ಹರ್ಷೇಂದ್ರ ಕುಮಾರ್ ಅವರ ಕುಟುಂಬ ನಡೆಸುತ್ತಿರುವ ಸಂಸ್ಥೆಗಳು ಮತ್ತು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದ ವಿರುದ್ಧ ಯಾವುದೇ ಮಾನನಷ್ಟಕರ ವಿಷಯ ಮತ್ತು ಮಾಹಿತಿಯನ್ನು ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಡಿಜಿಟಲ್ ಮಾಧ್ಯಮ, ಎಲ್ಲಾ ಸಾಮಾಜಿಕ ಮಾಧ್ಯಮ ಅಥವಾ ಯಾವುದೇ ರೀತಿಯ ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸುವುದು, ಪ್ರಸಾರ ಮಾಡುವುದು, ಫಾರ್ವರ್ಡ್ ಮಾಡುವುದು, ಅಪ್‌ಲೋಡ್ ಮಾಡುವುದು, ರವಾನಿಸುವುದು ಮತ್ತು ಪ್ರಸಾರ ಮಾಡುವುದನ್ನು ಮುಂದಿನ ವಿಚಾರಣೆಯವರೆಗೆ ನಿರ್ಬಂಧಿಸಿ ತಡೆಯಾಜ್ಞೆ ಹೊರಡಿಸಿದೆ ಎಂದು livelaw.in ವರದಿ ಮಾಡಿದೆ.

‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....