Homeಕರ್ನಾಟಕರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ : ಯೂಟ್ಯೂಬರ್ ಅಜೀತ್ ಭಾರ್ತಿ ವಿರುದ್ದ ಪ್ರಕರಣ ದಾಖಲು

ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ : ಯೂಟ್ಯೂಬರ್ ಅಜೀತ್ ಭಾರ್ತಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ರಾಹುಲ್ ಗಾಂಧಿ ವಿರುದ್ದ ಅಪಪ್ರಚಾರ ನಡೆಸಿರುವ ಆರೋಪದ ಮೇಲೆ ಬಲಪಂಥೀಯ ಯೂಟ್ಯೂಬರ್ ಅಜೀತ್ ಭಾರ್ತಿ ವಿರುದ್ದ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಬಿ.ಕೆ ಬೋಪಣ್ಣ ಅವರು ನೀಡಿದ ದೂರಿನನ್ವಯ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(ಎ)( ಧರ್ಮ, ಜಾತಿ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಮೂಡಿಸುವುದು) ಮತ್ತು 505(2) (ಜಾತಿ, ಧರ್ಮ, ಜನಾಂಗದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಉದ್ದೇಶದಿಂದ ನಕಲಿ ಸುದ್ದಿ ಹರಡುವುದು) ಅಡಿ ಜೂನ್ 15ರಂದು ಪ್ರಕರಣ ದಾಖಲಾಗಿದೆ.

ಜೂನ್‌ 6ರಂದು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅಜೀತ್ ಭಾರ್ತಿ” ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ರೀರಾಮ ಮಂದಿರದ ಬದಲಿಗೆ ಬಾಬ್ರಿ ಮಸೀದಿಯನ್ನು ಮರಳಿ ತರಲು ಉದ್ದೇಶಿಸಿದ್ದಾರೆ” ಎಂದು ಹೇಳಿದ್ದರು. ಆದರೆ, ರಾಹುಲ್ ಗಾಂಧಿ ತಮ್ಮ ಯಾವುದೇ ಭಾಷಣಗಳಲ್ಲಿ ಅಂತಹ ಹೇಳಿಕೆ ನೀಡಿಲ್ಲ. ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಅಜೀತ್ ಭಾರ್ತಿ ಸುಳ್ಳು ಸುದ್ದಿ ಹರಡಿದ್ದಾರೆ. ಈ ಮೂಲಕ ಸಮಾಜದಲ್ಲಿ ಸುವ್ಯವಸ್ಥೆ ಮತ್ತು ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ ಎಂದು ವಕೀಲ ಬಿ.ಕೆ ಬೋಪಣ್ಣ ದೂರಿನಲ್ಲಿ ಆರೋಪಿಸಿದ್ದರು.

ಇದನ್ನೂ ಓದಿ : ಪೋಕ್ಸೋ ಪ್ರಕರಣ: ಸಿಐಡಿ ಅಧಿಕಾರಿಗಳ ಮುಂದೆ ಹಾಜರಾದ ಬಿಎಸ್ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Even Narendra Modi,sha, and many others BJP leaders repeatedly told that that sriram temple would be buldosed if Congress comes to power.
    Why not some more comments to lodge against Modi sha and his Parivar.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...