ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಯೂಟ್ಯೂಬರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಂಧಿಸಲ್ಪಟ್ಟ ವ್ಯಕ್ತಿ ಎಳನಾಡು ನಿವಾಸಿ ಅನೀಶ್ ಅಬ್ರಹಾಂ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮನ್ನುತ್ತಿ ಪೊಲೀಸರು ಅಬ್ರಹಾಂನನ್ನು ಬಂಧಿಸಿ ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಶನಿವಾರ ರಾತ್ರಿ 9:30 ರ ಸುಮಾರಿಗೆ ಪ್ರಿಯಾಂಕಾ ತನ್ನ ಕ್ಷೇತ್ರ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರನ್ನು ಬೆಂಗಾವಲು ಮಾಡುತ್ತಿದ್ದ ಪೈಲಟ್ ವಾಹನದ ಹಾರ್ನ್‌ನಿಂದ ಸಿಟ್ಟಿಗೆದ್ದ ಆರೋಪಿ ಬೆಂಗಾವಲು ಪಡೆ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.
ಮನ್ನುತ್ತಿ ಸಬ್-ಇನ್ಸ್‌ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಅಡಚಣೆಯನ್ನು ತೆರವುಗೊಳಿಸಲು ಪ್ರಯತ್ನಿಸಿದಾಗ, ಆತ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಉದ್ದೇಶಪೂರ್ವಕವಾಗಿ ಬೆಂಗಾವಲು ಪಡೆಗೆ ಅಡ್ಡಿಪಡಿಸುವುದು, ಜೀವಕ್ಕೆ ಅಪಾಯವನ್ನುಂಟುಮಾಡುವುದು ಮತ್ತು ಪೊಲೀಸ್ ಸೂಚನೆಗಳನ್ನು ಧಿಕ್ಕರಿಸಿದ ಆರೋಪದ ಮೇಲೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಛತ್ತೀಸ್‌ಗಢ| ಪೊಲೀಸ್ ಎನ್‌ಕೌಂಟರ್‌ಗೆ ಮಹಿಳಾ ನಕ್ಸಲ್ ನಾಯಕಿ ರೇಣುಕಾ ಬಲಿ


