Homeಮುಖಪುಟನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ಸಿದ್ದಿಕಿ ವರದಿ ಮಾಡಿದ ಸುದ್ದಿ ಈಗಾಗಲೇ ಸಾರ್ವಜನಿಕ ವಲಯದಲ್ಲಿತ್ತು ಮತ್ತು ಸಿದ್ದಿಕಿ ಇತರ ಸುದ್ದಿ ವಾಹಿನಿಗಳನ್ನು ಸುದ್ದಿ ಮೂಲಗಳಾಗಿ ಅವಲಂಬಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಕ್ಷಯ್ ಕುಮಾರ್ ದಾಖಲಿಸಿರುವ ಮಾನಹಾನಿ ನೋಟಿಸ್ ಅನ್ನು ಯೂಟ್ಯೂಬರ್ ರಶೀದ್ ಸಿದ್ದಿಕಿ ವಿರೋಧಿಸಿದ್ದಾರೆ. ತಮ್ಮ ವೀಡಿಯೊಗಳಲ್ಲಿ ಮಾನಹಾನಿಕರ ವಿಷಯ ಯಾವುದು ಇಲ್ಲ ಎಂದು ಅವರು ಪುನರುಚ್ಚಿಸಿದ್ದಾರೆ.

ಯೂಟ್ಯೂಬರ್ ರಶೀದ್ ಸಿದ್ದಿಕಿ, ಅಕ್ಷಯ್ ಕುಮಾರ್ ಅವರಿಗೆ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ನೋಟಿಸ್  ಹಿಂಪಡೆಯದಿದ್ದರೆ ರಶೀದ್ ಸಿದ್ದಿಕಿ ನಟನ ವಿರುದ್ಧ “ಸೂಕ್ತ ಕಾನೂನು ಕ್ರಮಗಳನ್ನು” ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ತನ್ನ ವಿರುದ್ಧ “ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು” ಮಾಡಿದ್ದಕ್ಕಾಗಿ ಅಕ್ಷಯ್ ಕುಮಾರ್ ನವೆಂಬರ್ 17 ರಂದು ರಶೀದ್ ಸಿದ್ದಿಕಿ ವಿರುದ್ಧ 500 ಕೋಟಿ ರೂಪಾಯಿ ನಷ್ಟವನ್ನು ಕೋರಿ ಮಾನಹಾನಿ ನೋಟಿಸ್ ನೀಡಿದ್ದರು.

ಅಕ್ಷಯ್ ಕುಮಾರ್, ಕಾನೂನು ಸಂಸ್ಥೆ ಐಸಿ ಲೀಗಲ್ ಮೂಲಕ ಕಳುಹಿಸಿದ ನೋಟಿಸ್‌ನಲ್ಲಿ, ರಶೀದ್ ಸಿದ್ದಿಕಿ ತಮ್ಮ ಯೂಟ್ಯೂಬ್ ಚಾನೆಲ್ ಎಫ್‌ಎಫ್ ನ್ಯೂಸ್‌ನಲ್ಲಿ ಹಲವಾರು “ಮಾನಹಾನಿಕರ, ಅಪಮಾನಕರ ಮತ್ತು ಅವಹೇಳನಕಾರಿ” ವೀಡಿಯೊಗಳನ್ನು ಪ್ರಕಟಿಸಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ರಶೀದ್ ಸಿದ್ದಿಕಿ ಅವರು ಶುಕ್ರವಾರ ತಮ್ಮ ವಕೀಲ ಜೆ.ಪಿ.ಜಯ್ಸ್ವಾಲ್ ಅವರ ಮೂಲಕ ಕಳುಹಿಸಿದ ಉತ್ತರದಲ್ಲಿ, ಅಕ್ಷಯ್ ಕುಮಾರ್ ಮಾಡಿದ ಆರೋಪಗಳು “ಸುಳ್ಳು, ದುಃಖಕರ ಮತ್ತು ದಬ್ಬಾಳಿಕೆಯಾಗಿದೆ ಮತ್ತು ನನಗೆ ಕಿರುಕುಳ ನೀಡುವ ಉದ್ದೇಶದಿಂದ ನೋಟಿಸ್ ನೀಡಲಾಗಿದೆ” ಎಂದು ಹೇಳಿದ್ದಾರೆ.

’ಪ್ರತಿಯೊಬ್ಬ ಭಾರತೀಯ ಪ್ರಜೆಗೆ ವಾಕ್ ಸ್ವಾತಂತ್ರ್ಯದ ಮೂಲಭೂತ ಹಕ್ಕಿದೆ. ರಶೀದ್ ಸಿದ್ದಿಕಿ ಅಪ್‌ಲೋಡ್ ಮಾಡಿದ ವಿಷಯವನ್ನು ಮಾನಹಾನಿಕರವೆಂದು ಪರಿಗಣಿಸಲಾಗುವುದಿಲ್ಲ ಮತ್ತು ಅವುಗಳನ್ನು ವಸ್ತುನಿಷ್ಠತೆಯ ದೃಷ್ಟಿಕೋನಗಳಾಗಿ ಪರಿಗಣಿಸಬೇಕು’ ಎಂದು ಹೇಳಿದೆ.

“ಸಿದ್ದಿಕಿ ವರದಿ ಮಾಡಿದ ಸುದ್ದಿ ಈಗಾಗಲೇ ಸಾರ್ವಜನಿಕ ವಲಯದಲ್ಲಿತ್ತು ಮತ್ತು ಅವರು (ಸಿದ್ದಿಕಿ) ಇತರ ಸುದ್ದಿ ವಾಹಿನಿಗಳನ್ನು ಸುದ್ದಿ ಮೂಲಗಳಾಗಿ ಅವಲಂಬಿಸಿದ್ದಾರೆ” ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಈ ಹಿಂದೆಯೂ ರಶೀದ್ ಸಿದ್ದಿಕಿ ಮೇಲೆ, ಮುಂಬೈ ಪೊಲೀಸರು, ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವ ಆದಿತ್ಯ ಠಾಕ್ರೆ ವಿರುದ್ಧ ಮಾನಹಾನಿ, ಸಾರ್ವಜನಿಕ ಕಿಡಿಗೇಡಿತನ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ ಆರೋಪದಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಸಿಜೆಐ ಬೋಬ್ಡೆ ವಿರುದ್ಧ ಟ್ವೀಟ್: ಕುನಾಲ್ ಕಮ್ರ ವಿರುದ್ಧ ಮತ್ತೊಂದು ನ್ಯಾಯಾಂಗ ನಿಂದನೆ ಪ್ರಕರಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...