Homeಕರ್ನಾಟಕಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

- Advertisement -
- Advertisement -

ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ‘ದೂತ’ ಎಂಬ ಯೂಟ್ಯೂಬ್‌ ಚಾನೆಲ್‌ ನಲ್ಲಿ ಎಐ ಆಧಾರಿತ ವಿಡಿಯೊ ಪ್ರಸಾರ ಮಾಡಿದ್ದ ಯೂಟ್ಯೂಬರ್‌ ಸಮೀರ್‌ ಅವರಿಗೆ ಮಂಗಳೂರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರೆತಿದೆ.

ಪೊಲೀಸರು ಬಂಧಿಸಬಹುದು ಎಂಬ ಮುನ್ಸೂಚನೆ ಸಿಕ್ಕ ಕೂಡಲೇ ಸಮೀರ್‌ ತನ್ನ ವಕೀಲರ ಮೂಲಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಉಜಿರೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುತ್ತಿದ್ದಂತೆ ಸಮೀರ್‌ಗೆ ಬಂಧನದ ಭೀತಿ ಎದುರಾಗಿತ್ತು. ಇಂದು ಬೆಳಗಿನಿಂದಲೇ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಸಮೀರ್ ಮನೆಯನ್ನು ಪೊಲೀಸರು ಸುತ್ತುವರಿದಿದ್ದರು. ಅವರನ್ನು ಬಂಧಿಸಲು ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ವಿಡಿಯೊ ಮಾಡಿರುತ್ತಾರೆ, ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ್ದಾರೆ ಎಂದು ಸಮೀರ್‌ ವಿರುದ್ಧ ಹಲವಾರು ಪ್ರಕಣಗಳನ್ನು ದಾಖಲಿಸಲಾಗಿತ್ತು.

ಮೂಲತಃ ಬಳ್ಳಾರಿಯವರಾದ ಸಮೀರ್ ಎಂ.ಡಿ, ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ʼದೂತʼ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಮೂಲಕ ಹಲವು ವಿಷಯಗಳ ಕುರಿತು ವಿಡಿಯೋ ನಿರೂಪಿಸಿದ್ದಾರೆ. ಸೌಜನ್ಯಾ  ಅತ್ಯಚಾರ ಮತ್ತು ಕೊಲೆ ಪ್ರಕರಣ ಕುರಿತು ಇವರು ಮಾಡಿದ್ದ ಎಐ ವಿಡಿಯೊವನ್ನು ಕೋಟಿಗೂ ಹೆಚ್ಚು ಜನ ವೀಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕೌಲ್‌ ಬಜಾರ್‌ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಇಂದು ಬೆಳಗಿನಿಂದಲೇ ‘ಮುಖ್ಯವಾಹಿನಿ’ ಮಾಧ್ಯಮಗಳಲ್ಲಿ ಸಮೀರ್ ಪರಾರಿಯಾಗಿದ್ದಾರೆ ಎಂಬ ಸುದ್ದಿಗಳು ಪ್ರಕಟವಾಗುತ್ತಿದ್ದವು. ಸಮೀರ್‌ ಆಪ್ತರು ಸ್ಪಷ್ಟನೆ ನೀಡಿ ವಿಚಾರಣೆಗೆ ಹಾಜರಾಗಲು ಪೊಲೀಸರಿಗೆ ಲಿಖಿತವಾಗಿ ಸಮಾಯಾವಕಾಶವನ್ನು ಕೇಳಿದ್ದರು. 15 ದಿನಗಳ ಕಾಲಾವಕಾಶವನ್ನು ಪೊಲೀಸರು ನೀಡಿದ್ದರು. ಆದರೆ ಇಂದು ಮಧ್ಯಾಹ್ನ ಪೊಲೀಸರು ಏಕಾಏಕಿ ಸಮೀರ್ ಮನೆಗೆ ಸರ್ಚ್ ವಾರೆಂಟ್ ಇಲ್ಲದೆ ತಪಾಸಣೆಗೆ ಆಗಮಿಸಿದ್ದರು. ಸತ್ಯವನ್ನು ಜನರಿಗೆ ಹೇಳಿದವರನ್ನು ಪೊಲೀಸರು ಬೇಟೆಯಾಡುತ್ತಿದ್ದಾರೆ. ಸಮೀರ್ ತಮ್ಮ ವಕೀಲರ ಜೊತೆ ನ್ಯಾಯಾಲಯದಲ್ಲಿದ್ದಾರೆ, ಎಲ್ಲಿಗೂ ಓಡಿ ಹೋಗಿಲ್ಲ ಎಂದು ತಿಳಿಸಿದ್ದರು.

‘ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಲಿ..’; ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...