ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ‘ದೂತ’ ಎಂಬ ಯೂಟ್ಯೂಬ್‌ ಚಾನೆಲ್‌ ನಲ್ಲಿ ಎಐ ಆಧಾರಿತ ವಿಡಿಯೊ ಪ್ರಸಾರ ಮಾಡಿದ್ದ ಯೂಟ್ಯೂಬರ್‌ ಸಮೀರ್‌ ಅವರಿಗೆ ಮಂಗಳೂರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ದೊರೆತಿದೆ. ಪೊಲೀಸರು ಬಂಧಿಸಬಹುದು ಎಂಬ ಮುನ್ಸೂಚನೆ ಸಿಕ್ಕ ಕೂಡಲೇ ಸಮೀರ್‌ ತನ್ನ ವಕೀಲರ ಮೂಲಕ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಉಜಿರೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುತ್ತಿದ್ದಂತೆ ಸಮೀರ್‌ಗೆ ಬಂಧನದ ಭೀತಿ ಎದುರಾಗಿತ್ತು. ಇಂದು … Continue reading ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು