Homeಮುಖಪುಟವೈಎಸ್ ಶರ್ಮಿಳಾ ಹೆಗಲಿಗೆ ಆಂಧ್ರ ಕಾಂಗ್ರೆಸ್ ಸಾರಥ್ಯ?

ವೈಎಸ್ ಶರ್ಮಿಳಾ ಹೆಗಲಿಗೆ ಆಂಧ್ರ ಕಾಂಗ್ರೆಸ್ ಸಾರಥ್ಯ?

- Advertisement -
- Advertisement -

ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ಇಂದು ರಾಜೀನಾಮೆ ನೀಡಿದ್ದು, ವೈಎಸ್ ಶರ್ಮಿಳಾ ಅವರನ್ನು ರಾಜ್ಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ.

ಆಂಧ್ರದಲ್ಲಿ ವೈಎಸ್‌ ರಾಜಶೇಖರ್‌ ರೆಡ್ಡಿ ಪುತ್ರ, ಸಿಎಂ ಜಗನ್ ಮೋಹನ್ ರೆಡ್ಡಿಗೆ ಸೆಡ್ಡು ಹೊಡೆಯಲು ಪುತ್ರಿ ಶಾರ್ಮಿಳಾ ಅವರನ್ನು ಕಾಂಗ್ರೆಸ್‌ ಮುನ್ನೆಲೆಗೆ ತರಲು ತಂತ್ರ ರೂಪಿಸಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಅವರನ್ನು ಶೀಘ್ರದಲ್ಲೇ ಎಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂದು ಪಕ್ಷದ ಉನ್ನತ ಮೂಲವೊಂದು ತಿಳಿಸಿರುವ ಬಗ್ಗೆ ‘ದಿ ನ್ಯೂಸ್‌ ಮಿನಿಟ್‌’ ವರದಿ ಮಾಡಿದೆ.

ಅನೇಕ ಆಂಧ್ರ ಕಾಂಗ್ರೆಸ್ ನಾಯಕರು ಶರ್ಮಿಳಾ ‘ಆಂಧ್ರ ಕಾಂಗ್ರೆಸ್‌ ಸಾರಥ್ಯ’ ವಹಿಸಬೇಕೆಂದು ಬಯಸಿದ್ದರು. ಆದರೆ ಅವರು ಅದನ್ನು ಸ್ವೀಕರಿಸಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಆಂಧ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿರಲಿಲ್ಲ. ಬದಲಿಗೆ ರಾಜ್ಯಸಭಾ ನಾಮನಿರ್ದೇಶನಕ್ಕೆ ಬೇಡಿಕೆಯನ್ನಿಟ್ಟಿದ್ದರು ಎಂದು ಹೇಳಲಾಗಿದೆ. ಆದರೆ ಇದೀಗ ಶರ್ಮಿಳಾ ಅವರನ್ನು ಎಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಪ್ಪಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.

ಈ ಬೆಳವಣಿಗೆ ವೈಎಸ್‌ಆರ್‌ ಕುಟುಂಬದಲ್ಲಿ ಬಿರುಕು ಮೂಡಬಹುದು ಎಂದು ಕುಟುಂಬದ ಮೂಲವೊಂದು ಆತಂಕ ವ್ಯಕ್ತಪಡಿಸಿದೆ. ಶರ್ಮಿಳಾ ಅವರು ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿ ಜನವರಿ 4ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಈ ಬೆಳವಣಿಗೆಗೆ ಒಂದು ದಿನ ಮೊದಲು ಸಿಎಂ ಜಗನ್ ಅವರು ಚುನಾವಣೆಗೆ ಮುಂಚಿತವಾಗಿ ಕೆಲವು ವಿರೋಧ ಪಕ್ಷದ ಮೈತ್ರಿಗಳು ಕುಟುಂಬಗಳನ್ನು ಒಡೆಯಲು ಪ್ರಯತ್ನಿಸುತ್ತಿವೆ ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಶರ್ಮಿಳಾ, ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ನೋಡುವುದು ನನ್ನ ತಂದೆಯ ಕನಸಾಗಿತ್ತು ಮತ್ತು ನಾನು ಅದರ ಭಾಗವಾಗಲಿದ್ದೇನೆ ಎನ್ನುವುದು ನನಗೆ ಸಂತೋಷವಾಗಿದೆ. ತನಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧ. ಆಂಧ್ರಪ್ರದೇಶದಲ್ಲಿ ಮಾತ್ರವಲ್ಲ ಅಂಡಮಾನ್‌ನಲ್ಲಿದ್ದರೂ ನನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಲು ನಾನು ಸಿದ್ಧ ಎಂದು ಅವರು ಹೇಳಿದ್ದಾರೆ.

2012ರಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಗನ್‌ ಮೋಹನ್‌ ರೆಡ್ಡಿ ಜೈಲು ಪಾಲಾದಾಗ ಹಾಗೂ 2014, 2019ರ ಚುನಾವಣೆಗಳಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪರವಾಗಿ ಶರ್ಮಿಳಾ ಪ್ರಚಾರವನ್ನು ನಡೆಸಿದ್ದರು. ಆ ಬಳಿಕ  ಒಡಹುಟ್ಟಿದವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿತ್ತು.  ಶರ್ಮಿಳಾ ಅವರು 2021ರಲ್ಲಿ ನೆರೆಯ ರಾಜ್ಯವಾದ ತೆಲಂಗಾಣದಲ್ಲಿ YSRTP ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಹೋಗುವ ಮತಗಳನ್ನು ವಿಭಜಿಸಲು ಬಯಸದ ಕಾರಣ ತಾನು ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದ್ದರು.

ರುದ್ರರಾಜು ಅವರು 2022ರಲ್ಲಿ ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅವರು 2005ರಿಂದ 2007ರವರೆಗೆ ಆಂಧ್ರ ಪ್ರದೇಶ ವೈದ್ಯಕೀಯ ಮೂಲಸೌಕರ್ಯ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಇದನ್ನು ಓದಿ: ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...