Homeಮುಖಪುಟವೈಎಸ್‌ವಿ ದತ್ತಾ, ನಾಗೇಶ್ 'ಕೈ' ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

- Advertisement -
- Advertisement -

“ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಪಕ್ಷದ ಮೇಲೆ ಜನರ ವಿಶ್ವಾಸ ಕಡಿಮೆ ಆಗುತ್ತಿದೆ. ಹಾಗಾಗಿ ಬೇರೆ ಪಕ್ಷಗಳ ಅನೇಕ ನಾಯಕರು ಕಾಂಗ್ರೆಸ್ ಸೇರಲು ಮುಂದೆ ಬಂದಿದ್ದಾರೆ” ಎಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾಗೇಶ್, ವೈಎಸ್ವಿ ದತ್ತಾ ಅವರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸಂಕ್ರಮಣ, ರೈತರ ಬದುಕು ಶುಭಾರಂಭವಾಗುವ ಪವಿತ್ರ ದಿನ ನಾವೆಲ್ಲ ಇಂದು ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಸೇರಿದ್ದೇವೆ.

ಬಿಜೆಪಿಗೆ ಸರ್ಕಾರ ನಡೆಸಲು, ಜನರಿಗೆ ಉತ್ತಮ ಆಡಳಿತ ನೀಡಲು ಆಗುತ್ತಿಲ್ಲ. ಜನ ನಿತ್ಯ ನೋವು ಅನುಭವಿಸುತ್ತಿದ್ದಾರೆ ಎಂದು ಇಂದು ಅನೇಕ ನಾಯಕರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಬಿಜೆಪಿ ಸೇರಿದವರು, ಬಿಜೆಪಿಯಲ್ಲಿ ಇರುವ ಬಹಳ ನಾಯಕರು ಒಳಗೊಳಗೇ ಅನೇಕ ಚರ್ಚೆ ಮಾಡುತ್ತಿದ್ದು, ಆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದರು.

ಇಂದು ಮೂವರು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಬಂದಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ನಾಯಕರಾಗಿದ್ದ ವೈಎಸ್ ವಿ ದತ್ತಾ ಅವರು, ಬಿಜೆಪಿ ಸಹ ಸದಸ್ಯರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದ ಹಾಲಿ ಶಾಸಕ ನಾಗೇಶ್ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿ ವಿಧಾನಸಭೆಯಲ್ಲಿ ಸ್ಥಾನ ಪಡೆಯಲಿದ್ದಾರೆ. ಇವರಿಗೆ ಕಾಂಗ್ರೆಸ್ ಪಕ್ಷದ ಸಹ ಸದಸ್ಯತ್ವ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ದತ್ತಾ ಅವರನ್ನು ಕಳೆದ 48 ವರ್ಷಗಳಿಂದ ನಾನು ಬಲ್ಲೆ. ಅವರು ಪಾಠ ಮಾಡುವಾಗ ನಾನು ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದೆ. ಬಾಲ್ಯದಿಂದ ನಾವು ಆತ್ಮೀಯರು. ಅನೇಕ ಸಂಘಟನೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ಕಡೂರು ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷದ ವಿವಿಧ ಹುದ್ದೆಗಳ ನಿರ್ವಹಣೆ ಮಾಡಿದ್ದಾರೆ. ಅವರು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಜನತಾದಳದಲ್ಲಿ ಭವಿಷ್ಯ ಇಲ್ಲ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ರಾಹುಲ್ ಗಾಂಧಿ ಅವರ ಶ್ರಮ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಗಮನದಲ್ಲಿ ಇಟ್ಟುಕೊಂಡು ನಮ್ಮ ಪಕ್ಷಕ್ಕೆ ಸೇರುತ್ತಿದ್ದು, ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದರು.

ಈ ನಾಯಕರ ಜೊತೆಗೆ  ಹಲವು ಪ್ರಮುಖ ನಾಯಕರು ಪಕ್ಷ ಸೇರುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಪಕ್ಷದ ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿದ್ದೇವೆ. ಪಕ್ಷ ತನ್ನ ನಾಯಕರು ಹಾಗೂ ಕಾರ್ಯಕರ್ತರನ್ನು ವಿಸ್ತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಮೈಸೂರಿನ ಮೂಡಾ ಅಧ್ಯಕ್ಷರಾಗಿ ಕೆಲಸ ಮಾಡಿರುವ ಮೋಹನ್ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿದ್ದರು. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಕೋಲಾರ ಯುವ ಜನತಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ ದಯಾನಂದ್ ಅವರು ಪಕ್ಷಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಇದು ಆರಂಭ. ಇನ್ನು ಮುಂದೆ ಪ್ರತಿವಾರ ಅಥವಾ ಮೂರು ದಿನಕ್ಕೆ ಒಂದೊಂದು ದಿನ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗಿದ್ದು, ರಾಜ್ಯದ ಜನ ಈಗಾಗಲೇ ತಮ್ಮ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಗೇಶ್ ಅವರು ಹಾಲಿ ಶಾಸಕರು. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಪಕ್ಷದ ಕಡೆ ನೋಡಿದ್ದಾರೆ ಎಂದರೆ ಅವರ ಅನುಭವ, ಲೆಕ್ಕಾಚಾರ ಕೆಲಸ ಮಾಡಿದೆ. ಇನ್ನು ದತ್ತಾ ಅವರಿಗೆ ಜನರ ನಾಡಿ ಮಿಡಿತ ಗೊತ್ತಿದೆ. ಅವರಿಗೆ ತಮ್ಮದೇ ಆದ ಅನುಭವವಿದೆ. ದಳದ ಪರಿಸ್ಥಿತಿ ಗೊತ್ತಿದೆ. ಈ ಎಲ್ಲ ನಾಯಕರು ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಬೇರೆ ನಾಯಕರ ಷರತ್ತು ಒಪ್ಪಿ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಯಾರು ಬೇಷರತ್ತಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಲು ಬಯಸುತ್ತಾರೆ ಅಂತಹವರನ್ನು ಮಾತ್ರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪಕ್ಷ ಅವರ ಅರ್ಹತೆಗೆ ತಕ್ಕಂತೆ ಪಕ್ಷ ಅವರಿಗೆ ಸ್ಥಾನಮಾನ ನೀಡಲಿದೆ. ವ್ಯಕ್ತಿಗಿಂತ ನಮಗೆ ಪಕ್ಷ ಮುಖ್ಯ. ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ರೀತಿಯ ಲೆಕ್ಕಾಚಾರ ಮಾಡಿ ನಾವು ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...