Homeಮುಖಪುಟಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

ಚುನಾವಣೆ ಸೋಲು: ಸಂಘಟಿತ ದಾಳಿಯಿಂದ ಬೆಂಬಲಿಗರ ರಕ್ಷಣೆ ಕೋರಿ ವೈಎಸ್‌ಆರ್‌ಸಿಪಿ ರಾಷ್ಟ್ರಪತಿ ಮೊರೆ

- Advertisement -
- Advertisement -

ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಬರೆದಿದ್ದು, ಆಂಧ್ರಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ರಕ್ಷಣೆಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷದ ಸೋಲಿನ ನಂತರ ತಮ್ಮ ಬೆಂಬಲಿಗರ ಮೇಲೆ ಸಂಘಟಿತ ಹಿಂಸಾಚಾರ, ಹಲ್ಲೆ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿಲಾಗಿದೆ.

ರಾಷ್ಟ್ರಪತಿಗೆ ಮಾತ್ರವಲ್ಲದೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಝೀರ್ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಹರೀಶ್ ಕುಮಾರ್ ಗುಪ್ತಾ ಅವರಿಗೆ ಪಕ್ಷವು ಮಧ್ಯಪ್ರವೇಶಿಸುವಂತೆ ಪತ್ರಗಳನ್ನು ಕಳುಹಿಸಿದೆ.

ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಪಕ್ಷ (ಜೆಎಸ್‌ಪಿ), ಮತ್ತು ಬಿಜೆಪಿ ಮೈತ್ರಿಯು ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿಯನ್ನು ಹೀನಾಯವಾಗಿ ಸೋಲಿಸಿದೆ. ವೈಎಸ್‌ಆರ್‌ಸಿಪಿ ಕೇವಲ 11 ಸ್ಥಾನಗಳನ್ನು ಗಳಿಸಿದೆ. 175 ವಿಧಾನಸಭಾ ಸ್ಥಾನಗಳ ಪೈಕಿ 164 ಸ್ಥಾನಗಳೊಂದಿಗೆ ಮೈತ್ರಿಕೂಟವು ಭಾರಿ ಬಹುಮತದೊಂದಿಗೆ ಚುನಾವಣೆಯನ್ನು ಗೆದ್ದು ಸರ್ಕಾರ ರಚಿಸಲು ಸಜ್ಜಾಗಿದೆ.

ಜೂನ್ 4 ರಂದು ಫಲಿತಾಂಶಗಳು ಪ್ರಕಟವಾದ ನಂತರ ತನ್ನ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಹಲವಾರು ಹಿಂಸಾತ್ಮಕ ಕೃತ್ಯಗಳು ನಡೆದಿದೆ. ದಾಳಿಯ ಹಿಂದೆ ಭಾಗಿಯಾಗಿರುವ ಪಕ್ಷವನ್ನು ಪತ್ರದಲ್ಲಿ ಉಲ್ಲೇಖಿಸದಿದ್ದರೂ, ಪಕ್ಷದ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳು TDP ಮತ್ತು JSP ಬಗ್ಗೆ ಆರೋಪವನ್ನು ಮಾಡಿದೆ.  ಪಕ್ಷದ ಸ್ಥಳೀಯ ಕಾರ್ಯಕರ್ತರ ನಿವಾಸಗಳ ಮೇಲೆ ದಾಳಿ ನಡೆಸಿ ಅವರ ಆಸ್ತಿಪಾಸ್ತಿಗಳನ್ನು ನಾಶಪಡಿಸಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊವೊಂದರಲ್ಲಿ, ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ವೈಎಸ್‌ಆರ್‌ಸಿಪಿ ಮಾಜಿ ಶಾಸಕಿ ಮತ್ತು ಸಚಿವೆ ರೋಜಾ ಅವರ ಪೋಟೋಗಳನ್ನು ಹೊಂದಿರುವ ನಗರಿ ಕ್ಷೇತ್ರದಲ್ಲಿ ಕಲ್ಲಿನ ಫಲಕವನ್ನು ನಾಶಪಡಿಸಲಾಗಿದೆ. ಶುಕ್ರವಾರ ಕೃಷ್ಣಾ ಜಿಲ್ಲೆಯ ಗುಡಿವಾಡದಲ್ಲಿರುವ ಮಾಜಿ ಶಾಸಕ ಕೊಡಲಿ ನಾನಿ ಅವರ ನಿವಾಸದ ಮೇಲೆ ಟಿಡಿಪಿ ಬೆಂಬಲಿಗರು ಮೊಟ್ಟೆ ದಾಳಿ ನಡೆಸಿದ್ದಾರೆ. ದಾಳಿಗಳ ಪ್ರಮಾಣ ಕಳೆದ 24 ಗಂಟೆಗಳಲ್ಲಿ ಹೆಚ್ಚಾಗಿದೆ. ವೈಎಸ್‌ಆರ್‌ಸಿಪಿ ಬೆಂಬಲಿಗರನ್ನು ವಿಶೇಷವಾಗಿ ಎಸ್ಸಿ, ಎಸ್ಟಿ, ಒಬಿಸಿ ಅಲ್ಪಸಂಖ್ಯಾತ ಸಮುದಾಯಗಳು, ಮಹಿಳೆಯರು ಮತ್ತು ಮಕ್ಕಳು ಸೇರಿ ದುರ್ಬಲ ಗುಂಪುಗಳ ಜನರನ್ನು ಬೆದರಿಸುವ ಸಂಘಟಿತ ಪ್ರಯತ್ನದ ಭಾಗವಾಗಿದೆ. ಈ ಬಗ್ಗೆ ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳು ಕ್ರಮ ಕೈಗೊಳ್ಳಲು ವಿಫಲವಾಗಿದೆ. ಆದ್ದರಿಂದ ಅಧಿಕಾರಿಗಳು ಈ ಸಮಸ್ಯೆಯ ಬಗ್ಗೆ ತಕ್ಷಣ ಮತ್ತು ಗಂಭೀರವಾಗಿ ಗಮನಹರಿಸಬೇಕು ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ನಿರಂಜನ್‌ ರೆಡ್ಡಿ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್ ವಿವಿಪ್ಯಾಟ್‌ ಸುಧಾರಣೆ ನಿಲುವು ಹೊಂದಿದೆ ಹೊರತು ಇವಿಎಂಗಳನ್ನು ತಿರಸ್ಕರಿಸಿಲ್ಲ: ಪಿ ಚಿದಂಬರಂ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...