Homeಕರ್ನಾಟಕ‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್‌ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

“ಕಾಂಗ್ರೆಸ್‌ ಟಿಕೆಟ್‌ ನೀಡದೆ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಛಲ ತೊಟ್ಟಿದ್ದೇನೆ” ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, “ಈ ಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿತ್ತು. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ ಎಂಬುದಕ್ಕೆ ಪೂರಕವಾಗಿ 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ..

“ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನ ನನ್ನ ಅಭಿಮಾನಿಗಳು ಇಡೀ ರಾಜ್ಯಕ್ಕೆ ತೋರಿಸುತ್ತಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂಬ ಮಾಹಿತಿ ನೀಡಿದ್ದಾರೆ.

“ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ, ಅದನ್ನು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿದ ಬಳಿಕ ಅಭಿಮಾನಿಗಳಿಗೆ ಪತ್ರ ಬರೆದಿದ್ದ ದತ್ತ ಅವರು, “ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ, ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ‘ದತ್ತಣ್ಣ ನಮ್ಮ ದತ್ತಣ್ಣ’ ಎಮದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅವಮಾನವಾಗಿದೆ. ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿರಿ: ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ಹೆಚ್ಚಿನ ಸಂಖ್ಯೆಯಲ್ಲಿ ವೈಎಸ್‌ವಿ ದತ್ತ ಅವರ ಅಭಿಮಾನಿಗಳು ಸಭೆಯಲ್ಲಿ ಹಾಜರಿದ್ದರು. ಅದಕ್ಕೂ ಮುಂಚಿತವಾಗಿ ದತ್ತ ಅವರಿಗೆ ಬೆಂಬಲ ಸೂಚಿಸಿ, ಮೆರವಣಿಗೆ ನಡೆಸಿದ್ದರು.

ಜೆಡಿಎಸ್ ತೊರೆದ ವೈಎಸ್‌ವಿ ದತ್ತಾಗೆ ಮರಳಿ ಜೆಡಿಎಸ್ ಕಡೆ ಸೆಳೆದುಕೊಳ್ಳಲು ಮಾಜಿ‌ ಸಚಿವ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಸಿದ್ದರಾಮಯ್ಯ ಸಲಹೆಯಂತೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಕಡೂರು ಕ್ಷೇತ್ರಕ್ಕೆ ಸಹಜವಾಗಿ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ...

0
'ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ. 'ಪ್ರತಿಪಕ್ಷಗಳ ಇಂಡಿಯಾ...