Homeಮುಖಪುಟಯುವ ಸಂಕಲ್ಪ ಯಾತ್ರೆ:ಬಂಗಾಳದಲ್ಲಿ ಶಾಸಕ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ಬಂಧನ

ಯುವ ಸಂಕಲ್ಪ ಯಾತ್ರೆ:ಬಂಗಾಳದಲ್ಲಿ ಶಾಸಕ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಯುವ ಸಂಕಲ್ಪ ಯಾತ್ರೆ ನಡೆಸಲು ಸಿದ್ಧವಾಗಿದ್ದ, ಸಿಲಿಗುರಿ ಶಾಸಕ ಶಂಕರ್ ಘೋಷ್ ಸೇರಿದಂತೆ ಕನಿಷ್ಠ 30 ಭಾರತೀಯ ಜನತಾ ಪಕ್ಷದ ಕಾರ್ಯಕರ್ತರನ್ನು ಪಕ್ಷದ ಕಚೇರಿಯ ಮುಂದೆಯೇ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಯುವ ಸಂಕಲ್ಪ ಯಾತ್ರೆ ನಡೆಸಲು ಅನುಮತಿ ಪಡೆದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ಅವರು ಯುವ ಸಂಕಲ್ಪ ರ್‍ಯಾಲಿ ನಡೆಸಲು ಅನುಮತಿ ಪಡೆಯದ ಕಾರಣ ಅವರನ್ನು ಬಂಧಿಸಲಾಗಿದೆ” ಎಂದು ಸಿಲಿಗುರಿ ಮಹಾನಗರ ಪೊಲೀಸ್ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಾಯ್ ತುಡು ಹೇಳಿದ್ದಾರೆ.

ಶಾಸಕ ಮತ್ತು ಕಾರ್ಯಕರ್ತರ ಬಂಧನದ ನಂತರ, ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ಮಾಜಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ: ಟಿಎಂಸಿ ಸೇರ್ಪಡೆ

ಇನ್ನೊಂದು ಘಟನೆಯಲ್ಲಿ, 35 ಮಂದಿ ನಾರಾಯಣಿ ಸೇನಾ ಕಾರ್ಯಕರ್ತರನ್ನು ಬಾಗ್‌ದೋಗ್ರಾ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ. ಈ ಬಂಧಿತ ಕಾರ್ಯಕರ್ತರು ಅಲಿಪುರ್ದಾರ್‌ನ ಬಿಜೆಪಿ ಸಂಸದ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾದ ಜಾನ್ ಬಾರ್ಲಾ ಅವರನ್ನು ಆಹ್ವನಿಸಲು ವಿಮಾನ ನಿಲ್ದಾಣದಲ್ಲಿ ಸೇರಿದ್ದರು.

ಡಾರ್ಜಿಲಿಂಗ್‌ನ ಬಿಜೆಪಿ ಸಂಸದ ಮತ್ತು ರಾಷ್ಟ್ರೀಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜು ಬಿಸ್ತಾ , “ದೇಶದ 75 ವರ್ಷಗಳ ಸ್ವಾತಂತ್ರ್ಯ ದಿನದ ಅಂಗವಾಗಿ ಬಿಜೆಪಿಯ ಮೋರ್ಚಾ ಕಾರ್ಯಕರ್ತರು ಯಾತ್ರೆಯನ್ನು ಆರಂಭಿಸುತ್ತಿದ್ದಾರೆ. ಒಟ್ಟು 75 ಯುವ ಮೋರ್ಚಾ ನಾಯಕರು, 75 ಸ್ಥಳಗಳಲ್ಲಿ, 75 ಕಿಮೀ ರ್‍ಯಾಲಿ ನಡೆಸಲಿದ್ದಾರೆ” ಎಂದಿದ್ದಾರೆ.

’ಆದರೆ, ಪೊಲೀಸರು ಯಾತ್ರೆಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಇದು ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯ ಪೊಲೀಸರು ರಾಷ್ಟ್ರ ವಿರೋಧಿ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಇದು ರಾಜ್ಯ ಮತ್ತು ದೇಶಕ್ಕೆ ಆತಂಕಕಾರಿ ಪರಿಸ್ಥಿತಿ” ಎಂದು ರಾಜು ಬಿಸ್ತಾ ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ಅತಿಯಾದ ವಿಶ್ವಾಸದಿಂದ ಬಂಗಾಳದಲ್ಲಿ ಸೋಲು: ಸುವೆಂದು ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೀಘ್ರವೇ ಪೌರಕಾರ್ಮಿಕರ ಉಪಹಾರ ಭತ್ಯೆ ₹70 ಕ್ಕೆ ಹೆಚ್ಚಿಸುವೆ: ಸಿಎಂ ಡಿ.ಕೆ. ಶಿವಕುಮಾರ್

ಪೌರಕಾರ್ಮಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪೌರಕಾರ್ಮಿಕರ ಉಪಹಾರ ಭತ್ಯೆಯನ್ನು ₹35 ರಿಂದ ₹70 ಕ್ಕೆ ಏರಿಕೆ ಮಾಡಿ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...

ಎಸ್ಐಆರ್ ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ : ಪ್ರಕಾಶ್ ರಾಜ್

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಬಡವರ ಪಾಲಿನ ಕೊಲ್ಲುವ ಕತ್ತಿಯಾಗಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು. ಎಸ್ಐಆರ್ ಪರಿಶೋಧನೆ ಮತ್ತು ಪ್ರತಿರೋಧ ಜಾಥಾದ ಭಾಗವಾಗಿ ಶುಕ್ರವಾರ (ಸೆ.25)...

ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ದಲಿತ ಸಂಘಟನೆಗಳ ಒಕ್ಕೂಟ ಖಂಡನೆ

ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಂದ ಬೆಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಸಂಘಟನೆಗಳ...

ಮುರ್ಷಿದಾಬಾದ್‌: ಎಸ್ಐಆರ್ ಪ್ರಕ್ರಿಯೆಯಲ್ಲಿ ಹೆಸರುಗಳು ಉಳಿದರೂ ‘ಬಾಂಗ್ಲಾದೇಶಿ’ ಎಂದು ಅನುಮಾನಿಸಿ 60 ವರ್ಷದ ತಂದೆ, ಮೂವರು ಪುತ್ರರ ಗಡಿಪಾರು ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಂಗಾಳಿ ಮುಸ್ಲಿಂ ಕುಟುಂಬವೊಂದರ ನಾಲ್ವರು ಸದಸ್ಯರನ್ನು ಪೊಲೀಸರು ಮನೆಯಿಂದ ಕರೆದೊಯ್ದು, ಅವರು ಬಾಂಗ್ಲಾದೇಶಿ ಪ್ರಜೆಗಳು ಎಂದು ಆರೋಪಿಸಿ ಬಿಎಸ್‌ಎಫ್‌ಗೆ ಹಸ್ತಾಂತರಿಸಿ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು...

ಗ್ಯಾನೇಶ್ ಕುಮಾರ್‌ನನ್ನು ಬಂಧಿಸುವಂತೆ ಬಿ.ಕೆ. ಹರಿಪ್ರಸಾದ್ ಆಗ್ರಹ: ನಾಳೆ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಇನ್ನುಳಿದ ಇಬ್ಬರು ಆಯುಕ್ತರ ಭಿನ್ನಮತವನ್ನು ಸಂಪೂರ್ಣವಾಗಿ ತಳ್ಳಿಹಾಕಿ ಗೌಪ್ಯವಾಗಿ 'ಎಸ್‌ಐಆರ್'...

‘ಪೆನ್ಶನ್ ಹೋಗಲ್ಲ, SIR ಹೋಗುತ್ತೆ, ಹೆದರಬೇಡಿ’: ತುಮಕೂರಿನಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕಾಶ್ ರಾಜ್ ಭರವಸೆ

ತುಮಕೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ನೋಟಿಸ್‌ಗಳಿಂದ ಆತಂಕಕ್ಕೊಳಗಾಗಿರುವ ತುಮಕೂರಿನ ಎನ್‌ಆರ್ ಕಾಲೊನಿಯ ನಿವಾಸಿಗಳ ಮನೆಗಳಿಗೆ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಭೇಟಿ ನೀಡಿ, ಅವರ ಸಮಸ್ಯೆಗಳನ್ನು...

SIR ಅಕ್ರಮ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾಂವಿಧಾನಿಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಶಿಸ್ತು ಹಾಗೂ...

ಜೆನ್ ಝಿ ಮತದಾರರ ನೋಂದಣಿ ಸ್ಥಗಿತದ ಹಿಂದೆ ಮೋದಿ-ಸಿಇಸಿ ಸಂಚು: ಕಾಂಗ್ರೆಸ್ ಆರೋಪ

18 ವರ್ಷ ತುಂಬಿದ ಯುವಜನರನ್ನು (Gen Z) ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ 'ವಿಶೇಷ ಸಂಕ್ಷಿಪ್ತ ಪರಿಷ್ಕರಣೆ' (SSR) ಪ್ರಕ್ರಿಯೆಯು 2024 ರಿಂದ ತಡೆಹಿಡಿಯಲ್ಪಟ್ಟಿರುವುದು ಹಾಗೂ ಈ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗದಲ್ಲಿ (ECI)...

ತುಮಕೂರಿನ ಎನ್.ಆರ್. ಕಾಲೋನಿ ಕೋತಿ ತೋಪಿನಲ್ಲಿ ಎಸ್ಐಆರ್ ಪರಿಶೋಧನೆ: ಸಂತ್ರಸ್ತರ ಅಹವಾಲು ಆಲಿಸಿದ ಪ್ರಕಾಶ್ ರಾಜ್: ಸೆ.26ಕ್ಕೆ ಬೆಂಗಳೂರಿನಲ್ಲಿ ಪ್ರತಿಭಟನೆ

ತುಮಕೂರು: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ನೇರವಾಗಿ ಪರಿಶೀಲಿಸುವ ಉದ್ದೇಶದಿಂದ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು ತುಮಕೂರು ನಗರದ ಎನ್‌ಆರ್‌ ಕಾಲೊನಿ...

SIR ವಿವಾದ ಮತ್ತು ಆಂತರಿಕ ಬಿಕ್ಕಟ್ಟು: ಮೀರತ್, ವಾರಾಣಸಿ ಪ್ರವಾಸ ದಿಢೀರ್ ರದ್ದುಗೊಳಿಸಿದ ಗ್ಯಾನೇಶ್‌ ಕುಮಾರ್! Gen-Z ಆಕ್ರೋಶಕ್ಕೆ ಬೆದರಿತೇ ಆಯೋಗ?

ದೇಶಾದ್ಯಂತ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (SIR) ವಿವಾದ, ಸ್ಥಗಿತಗೊಂಡಿರುವ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ (SSR) ಹಾಗೂ ಚುನಾವಣಾ ಆಯೋಗದ ಉನ್ನತ ಹಂತದ ಶೀತಲ...