Homeಮುಖಪುಟಎಕ್ಸಿಟ್‌ ಪೋಲ್‌ ನಂತರ ದೆಹಲಿ ಮತದಾರರನ್ನು ಬೇಕಾಬಿಟ್ಟಿ ಬೈದುಬಿಟ್ಟ ಟಿವಿ ನಿರೂಪಕ ಸುಧೀರ್ ಚೌಧರಿ!

ಎಕ್ಸಿಟ್‌ ಪೋಲ್‌ ನಂತರ ದೆಹಲಿ ಮತದಾರರನ್ನು ಬೇಕಾಬಿಟ್ಟಿ ಬೈದುಬಿಟ್ಟ ಟಿವಿ ನಿರೂಪಕ ಸುಧೀರ್ ಚೌಧರಿ!

‘ಬಾಲಕೋಟ್ ವೈಮಾನಿಕ ದಾಳಿ, 370 ರದ್ದು, ರಾಮ್ ಮಂದಿರ ನಿರ್ಮಾಣದ ಬಗ್ಗೆ ದೆಹಲಿಯ ಜನತೆ ತಲೆಕೆಡಿಸಿಕೊಂಡಿಲ್ಲ ಎಂಬುದು ಅವಮಾನಕಾರ ಸಂಗತಿ’ ಎಂದು ಎಂದು ಬಿಜೆಪಿ ಪರ ನಿರೂಪಕ ಚೌಧರಿ ಕಿಡಿಕಾರಿದ್ದಾರೆ.

- Advertisement -
- Advertisement -

ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ಎಎಪಿ ಗೆಲುವಿನ ಮುನ್ಸೂಚನೆ ನೀಡಿದ ನಂತರ ಟಿವಿ ನಿರೂಪಕ ಸುಧೀರ್ ಚೌಧರಿ ದೆಹಲಿ ಮತದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಝೀ Newsನ ಬಿಜೆಪಿ ಪರ ನಿರೂಪಕ, ಸುಧೀರ್ ಚೌಧರಿ, ಶನಿವಾರ ಸಂಜೆ ವಿಧಾನಸಭಾ ಚುನಾವಣೆಯ ಎಕ್ಸಿಟ್‌ ಪೋಲ್‌ ಫಲಿತಾಂಶಗಳನ್ನು ಘೋಷಿಸಿದ ನಂತರ ದೆಹಲಿಯ ಮತದಾರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಬಾಲಕೋಟ್ ವೈಮಾನಿಕ ದಾಳಿ, 370 ರದ್ದು, ರಾಮ್ ಮಂದಿರ ನಿರ್ಮಾಣದ ಬಗ್ಗೆ ದೆಹಲಿಯ ಜನತೆ ತಲೆಕೆಡಿಸಿಕೊಂಡಿಲ್ಲ ಎಂಬುದು ಅವಮಾನಕಾರ ಸಂಗತಿ’ ಎಂದು ಎಂದು ಬಿಜೆಪಿ ಪರ ನಿರೂಪಕ ಚೌಧರಿ ಕಿಡಿಕಾರಿದ್ದಾರೆ. “ದೇಶವು ತುಂಡು ತುಂಡುಗಳಾಗಿ ವಿಭಜನೆಯಾಗುವುದರ” ಬಗ್ಗೆಯೂ ಅವರು ಕಾಳಜಿ ವಹಿಸುವುದಿಲ್ಲ. ಅವರು ತಮ್ಮ ಸ್ಥಳೀಯ ಹೋರಾಟಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಹೊರತು ರಾಷ್ಟ್ರೀಯ ಪ್ರಾಮುಖ್ಯತೆಯ ದೊಡ್ಡ ವಿಷಯಗಳ ಬಗ್ಗೆ ಅಲ್ಲ ಎಂದು ಅವರು ಹೇಳಿದ್ದಾರೆ.

“ದೆಹಲಿಯ ಜನರು ಸೋಮಾರಿಯಾಗಿದ್ದಾರೆ. ಅವರು ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾತ್ರ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಬಯಸುತ್ತಾರೆ. ಆದರೆ ಮತ ಚಲಾಯಿಸಲು ಹೊರಬರುವುದಿಲ್ಲ” ಎಂದು ಮತ ಹಾಕದವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚೌಧರಿಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ಅನೇಕ ಟ್ವಿಟರ್ ಬಳಕೆದಾರರನ್ನು ಹಾಸ್ಯಮಯ ಮತ್ತು ಟ್ರೋಲ್‌ ಮೇಮ್‌ಗಳನ್ನು ಪೋಸ್ಟ್ ಮಾಡಲು ಪ್ರೇರೇಪಿಸಿದೆ. ಅಂತಹ ಕೆಲವು ಇಲ್ಲಿವೆ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...