Homeಮುಖಪುಟಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಸ್ವಾತಂತ್ಯ್ರ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ಅಪರಾಧಿಯಂತೆ ಚಿತ್ರಸಿದ ZEE5 ವೆಬ್‌ಸಿರೀಸ್‌

ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

- Advertisement -
- Advertisement -

ZEE5 ಒಟಿಟಿಯಲ್ಲಿ ಪ್ರಸಾರವಾಗುವ ಕುನಾಲ್ ಖೇಮು ಅಭಿನಯದ ವೆಬ್‌ಸಿರೀಸ್‌ ’ಅಭಯ್ 2’ ನ ದೃಶ್ಯವೊಂದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಖುದಿರಾಮ್ ಬೋಸ್‌ನನ್ನು ’ಅಪರಾಧಿ’ ಎಂಬಂತೆ ಚಿತ್ರಿಸಿರುವುದು ವಿವಾದ ಎಬ್ಬಿಸಿದ್ದು, ಬಂಗಾಳಿ ಸಮುದಾಯದಲ್ಲಿ ಆಕ್ರೋಶ ಹುಟ್ಟುಹಾಕಿದೆ.

ನಟ ರುದ್ರಾನಿಲ್ ಘೋಷ್ ಮತ್ತು ಶಾಸಕ ಮದನ್ ಮಿತ್ರ ಸೇರಿದಂತೆ ಹಲವಾರು ಜನರು ಇದನ್ನು ಖಂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಜಫರ್‌ ನಗರ ಪಿತೂರಿ ಪ್ರಕರಣದಲ್ಲಿನ ಪಾತ್ರಕ್ಕಾಗಿ 18 ವರ್ಷದ ಖುದಿರಾಮ್ ಬೋಸ್‌ ಅವರಿಗೆ ಬ್ರಿಟಿಷ್ ಸರ್ಕಾರ ಮರಣದಂಡನೆ ವಿಧಿಸಿತ್ತು. ಪ್ರಕರಣದಲ್ಲಿ ಅವರು ಮತ್ತು ಕ್ರಾಂತಿಕಾರಿ ಪ್ರಫುಲ್ಲಾ ಚಾಕಿ ಬ್ರಿಟಿಷ್ ನ್ಯಾಯಾಧೀಶರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದರು, ಆದರೆ ಅದು ವಿಫಲವಾಗಿತ್ತು. ಆಗಸ್ಟ್ 11, 1908 ರಂದು ಗಲ್ಲಿಗೇರಿಸಲ್ಪಟ್ಟ ಬೋಸ್, ಗಲ್ಲು ಶಿಕ್ಷೆಗೆ ಗುರಿಯಾದ ಅತ್ಯಂತ ಕಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆಯಾದ ”ಅಭಯ್ 2” ರ ಮೂರನೇ ಎಪಿಸೋಡ್‌ಗಳಲ್ಲಿ, ಖುದಿರಾಮ್ ಬೋಸ್‌ರ ಭಾವಚಿತ್ರವನ್ನು ಇತರ ಅಪರಾಧಿಗಳೊಂದಿಗೆ ಪೊಲೀಸ್ ಠಾಣೆಯಲ್ಲಿರುವ ಬೋರ್ಡ್‌ನಲ್ಲಿ ಅಂಟಿಸಿ ಇಡಲಾಗಿತ್ತು. ಇದನ್ನು ವಿರೋಧಿಸಿ ಜಾಲತಾಣಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಇದನ್ನು “ಅತ್ಯಂತ ನಾಚಿಕೆಗೇಡು” ಎಂದು ಬಣ್ಣಿಸಿ “ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ದುರ್ಬಲಗೊಳಿಸಿದ್ದಾರೆ” ಎಂದು ಬಿಜೆಪಿಯನ್ನು ದೂಷಿಸಿದ್ದಾರೆ. “ಬಿಜೆಪಿ ಸರ್ಕಾರದಲ್ಲಿ ಇದು ಹೊಸ ರೂಡಿಯಾಗಿದೆ ಎಂದು ನಾನು ಊಹಿಸುತ್ತೇನೆ, ಎಲ್ಲಾ ಕ್ಷೇತ್ರಗಳಲ್ಲಿ ಬಂಗಾಳಿಗಳ ಕೊಡುಗೆಯನ್ನು ಹಾಳುಮಾಡಲು ಇತಿಹಾಸವನ್ನು ವಿರೂಪಗೊಳಿಸಿದೆ” ಎಂದು ಅವರು ಹೇಳಿದ್ದಾರೆ.

ওয়েব সিরিজের দৃশ্যে ক্রিমিনাল চার্টে শহীদ ক্ষুদিরাম বসুর ছবি??!! এ ভুল হয় কি করে? সংশোধন করুন #ZEE5 ???

Posted by Rudranil Ghosh on Sunday, August 16, 2020

ಬಂಗಾಳಿ ಚಿತ್ರೋದ್ಯಮದ ಪ್ರಮುಖ ನಟ ರುದ್ರಾನಿಲ್ ಘೋಷ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡು, ಅದರಲ್ಲಿ ಅವರು ತಮ್ಮ ಟಿವಿಯಲ್ಲಿ ಓಡುತ್ತಿರುವ ದೃಶ್ಯವನ್ನು ತೋರಿಸಿದರು ಮತ್ತು “ಇದು ಅನಪೇಕ್ಷಿತ ತಪ್ಪು ಎಂದು ನಾನು ನಂಬುತ್ತೇನೆ. ಇದನ್ನು ಎಡಿಟ್ ಮಾಡಲು ನಾನು ZEE5 ಗೆ ವಿನಂತಿಸುತ್ತೇನೆ” ಎಂದಿದ್ದಾರೆ.

ಒಂದು ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ZEE5 ಅಧಿಕೃತ ಹ್ಯಾಂಡಲ್, ವೆಬ್‌ಸೀರಿಸ್ ತಯಾರಕರು ಯಾವುದೇ ಸಮುದಾಯದ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದೆ.

“ನಿರ್ಮಾಪಕರು, ವೆಬ್‌ಸೀರಿಸ್‌ ಮತ್ತು ವೇದಿಕೆ, ಯಾವುದೇ ಸಮುದಾಯದ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ. ಪ್ರತಿಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಅಭಯ್ 2 ರ ದೃಶ್ಯದಲ್ಲಿ ಬಳಸಿದ ಚಿತ್ರವನ್ನು ನಾವು ಮಸುಕಾಗಿಸಿದ್ದೇವೆ” ಎಂದು ಟ್ವೀಟ್ ಹೇಳಲಾಗಿದೆ.


ಓದಿ: `ನಾಳೆ ಬೆಳಿಗ್ಗೆ ಐತಿ ಮಹಾ ಮರಣ, ಶರಣಂತಾವ ನಮ್ಮ ಪಂಚ ಹರಣ’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...