Homeಮುಖಪುಟಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

- Advertisement -
- Advertisement -

ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್ ಪ್ರಕರಣದಲ್ಲಿ ಏನೋ ತಪ್ಪಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದೀಪಕ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ವಿದ್ಯಮಾನಗಳ ವರದಿಗಳನ್ನು ಮಾಡುವ ‘ಲೈವ್‌ ಲಾ’ ಜಾಲತಾಣದೊಂದಿಗೆ ಮಾತನಾಡಿರುವ ಅವರು, ಜುಬೇರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸಂಗತಿಗಳ ಕುರಿತು ಪ್ರಸ್ತಾಪ ಮಾಡಿದ್ದಾರೆ.

“ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳಾಯಿತು. ಪೋಸ್ಟ್‌ ಮಾಡಲಾಗಿರುವ ಚಲನಚಿತ್ರದ ದೃಶ್ಯವನ್ನು ನಿರ್ಮಿಸಿ 40 ವರ್ಷಗಳಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ದೂರು ನೀಡಿಲ್ಲ. ಪೊಲೀಸರು ಇದ್ದಕ್ಕಿದ್ದಂತೆ ಹೇಗೆ ಎಚ್ಚರಗೊಂಡರು?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾರ್ವಜನಿಕ ಅಭಿಪ್ರಾಯಕ್ಕೆ ಭಯಬಿದ್ದು ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಿದ್ದಾರೆ ಎಂದು ಹೇಳುತ್ತಿರುವುದಕ್ಕೆ ಕ್ಷಮೆ ಇರಲಿ. ನಮ್ಮ ಜೈಲುಗಳು ವಿಚಾರಣಾಧೀನ ಕೈದಿಗಳಿಂದ ತುಂಬಿವೆ. ಅವರಲ್ಲಿ 70-80% ಜನರು ಖುಲಾಸೆಯಾಗಿದ್ದಾರೆ. ನ್ಯಾಯಾಧೀಶರು ಮನಸ್ಥಿತಿಯನ್ನು ಬದಲಿಸಿ ದೇಶದ ನಿಯಮವನ್ನು ಅನುಸರಿಸಬೇಕು. ದೇಶದ ನಿಯಮ ಜಾಮೀನು ನೀಡುವುದಾಗಿದೆಯೇ ಹೊರತು ಜೈಲಲ್ಲ ಎಂದು ಜಸ್ಟೀಸ್‌ ದೀಪಕ್‌ ಗುಪ್ತಾ ತಿಳಿಸಿದ್ದಾರೆ.

ಜನರ ಹಕ್ಕುಗಳ ಪಾಲಕರಾಗಿ ಉನ್ನತ ನ್ಯಾಯಾಲಯಗಳು ವಿವಾದಗಳ ತೀರ್ಪುಗಾರರಾಗಿ ಉತ್ತಮ ಕೆಲಸ ಮಾಡುತ್ತಿದ್ದರೂ, ಸುಧಾರಣೆಗೆ ಅವಕಾಶವಿದೆ ಎಂದಿದ್ದಾರೆ.

ಸರಿಯಾದ ಪರೀಕ್ಷೆ ನಡೆಸದೆ ನ್ಯಾಯಾಲಯಗಳು ಜಾಮೀನು ನಿರಾಕರಿಸುವ ಆತಂಕಕಾರಿ ಪ್ರವೃತ್ತಿಯ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯದ ಭಯದಿಂದ ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಾರೆ. ಮ್ಯಾಜಿಸ್ಟ್ರೇಟ್‌ಗಳಿಗೆ ತರಬೇತಿ ನೀಡುವ ನ್ಯಾಯಾಂಗ ಅಕಾಡೆಮಿಗಳು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವಿದ್ದೇವೆ ಎಂಬುದನ್ನು ಅವರ ಮನಸ್ಸಿನಲ್ಲಿ ತುಂಬಬೇಕು ಎಂದಿದ್ದಾರೆ.

“ನಾನು ‘ದುರುದ್ದೇಶಪೂರಿತ’ ಎಂದು ಹೇಳುವ ಮಟ್ಟಕ್ಕೆ ಹೋಗುವುದಿಲ್ಲ. ಕಾನೂನಿನಲ್ಲಿನ ದುರುದ್ದೇಶವು ತುಂಬಾ ವಿಭಿನ್ನವಾಗಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೋ ತಪ್ಪಾಗಿದೆ ಎಂದು ನಾನು ಖಂಡಿತವಾಗಿ ಭಾವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ಧಾರ್ಮಿಕ ಸಮುದಾಯಗಳ ನಡುವೆ ದೊಡ್ಡ ಅಸಮಾಧಾನವನ್ನು ಉಂಟುಮಾಡುವ ಸಾಧ್ಯತೆಯಿರುವ ಯಾವುದೋ ವಿಷಯದ ವ್ಯಾಪ್ತಿಯಲ್ಲಿ ಈ ಟ್ವೀಟ್‌ ಬರುತ್ತದೆಯೇ? ಏನಾದರೂ ಅಪರಾಧವಾಗಬೇಕಾದರೆ, ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವ ಪ್ರವೃತ್ತಿಯನ್ನು ಹೊಂದಿರಬೇಕು. ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳ ನಂತರ ಮತ್ತು ಈ ಚಲನಚಿತ್ರವು ತಯಾರಾಗಿ 40 ವರ್ಷಗಳ ನಂತರ ವಿವಾದ ಸೃಷ್ಟಿಯಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ಈ ಟ್ವೀಟ್‌ಗೆ ದೂರು ನೀಡಿಲ್ಲ. ಪೊಲೀಸರು ಏಕಾಏಕಿ ಎಚ್ಚೆತ್ತುಕೊಂಡು ನಮಗೆ ಅನಾಮಧೇಯ ದೂರು ಬಂದಿದೆ ಎಂದು ಹೇಗೆ ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

ಇಂದು ನೀವು ದೂರು ನೀಡಲು ಹೋದರೆ, ಬಡವರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ, ತುಂಬಾ ಗಂಭೀರವಾದ ಅಪರಾಧದಲ್ಲೂ ದೂರು ದಾಖಲಿಸುವುದು ತುಂಬಾ ಕಷ್ಟ. ಅವರು ‘ಲಿಖಿತ ದೂರು ಸಲ್ಲಿಸಿ, ಅಫಿಡವಿಟ್ ಸಲ್ಲಿಸಿ’ ಎಂದು ಹೇಳುತ್ತಾರೆ. ಈಗ ಟ್ವೀಟ್‌ ಸಂಬಂಧ ದೂರು ನೀಡಲಾಗಿದೆ ಎಂದು ಅವರು ಹೇಳುತ್ತಾರೆ. ಇದು ಕಾನೂನುಬಾಹಿರ ಎಂದು ನಾನು ಹೇಳುತ್ತಿಲ್ಲ – ಅವರು ಅದನ್ನು ಮಾಡಬಹುದು. ಆದರೆ ಸಾಮಾನ್ಯ ಪ್ರಕರಣಗಳಲ್ಲಿ ಅವರು ಹೀಗೆಯೇ ಮಾಡುತ್ತಾರೆಯೇ? ಸುಪ್ರೀಂ ಕೋರ್ಟ್‌ನಲ್ಲಿ ಮಹಿಳೆಯರು ಹೋಗಿ ಅತ್ಯಾಚಾರದ ದೂರು ನೀಡಿದರೂ ಪ್ರಕರಣ ದಾಖಲಾಗದ ಪ್ರಕರಣಗಳನ್ನು ನಾವು ಪ್ರತಿದಿನ ನೋಡುತ್ತೇವೆ. ನಾವು ಕಳೆದ ವರ್ಷ ಹತ್ರಾಸ್‌ ಪ್ರಕರಣ ಹಾಗೂ ಇತರ ಹಲವು ನಿದರ್ಶನ ಕಂಡಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...