Homeರಾಷ್ಟ್ರೀಯಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಲೈ 20ರ ವರೆಗೆ ಯುಪಿ ಪೊಲೀಸರು ಅವರನ್ನು ಬಂಧಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾದ ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಆತುರದ ಕ್ರಮ ಕೈಗೊಳ್ಳದಂತೆ ಸೋಮವಾರದಂದು ಸುಪ್ರೀಂಕೋರ್ಟ್ ಜುಲೈ 20 ರವರೆಗೆ ರಕ್ಷಣೆ ಒದಗಿಸಿದೆ. ಜೊತೆಗೆ ಅವರು ಅನೇಕ ಪ್ರಕರಣಗಳ ‘ವಿಷ ವರ್ತುಲ’ ದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಯುಪಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಐದು ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿದ್ದ ಜುಬೈರ್ ಅವರ ಮನವಿಯನ್ನು ಬುಧವಾರ ವಿಚಾರಣೆಗೆ ಮುಂದೂಡಿದೆ. ಜುಬೈರ್ ವಿರುದ್ಧ ದಾಖಲಾಗಿರುವ ಐದು ಎಫ್‌ಐಆರ್‌ಗಳ ಅಡಿಯಲ್ಲಿ ಜುಲೈ 20ರ ವರೆಗೆ ಯುಪಿ ಪೊಲೀಸರು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದ ಅರ್ಥ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೈರ್ ಪರ ವಕೀಲರಾದ ವೃಂದಾ ಗ್ರೋವರ್ ಅವರು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎ ಎಸ್ ಬೋಪಣ್ಣ ಅವರ ಪೀಠಕ್ಕೆ ಎಫ್‌ಐಆರ್‌ಗಳ ವಿಷಯವು ದೆಹಲಿ ಪೊಲೀಸರು ದಾಖಲಿಸಿದಂತೆಯೇ ಇದೆ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರು ಜಬೇರ್‌ ಅವರ ಟ್ವೀಟ್‌ಗಳಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ನಿಂದಿಸಲಾಗಿದೆ ಮತ್ತು ವಿದೇಶದಿಂದ ಅನಧಿಕೃತ ಹಣವನ್ನು ಪಡೆದಿವೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

“ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಜುಬೈರ್ ವಿರುದ್ಧ ಆತುರದ ಕ್ರಮವನ್ನು ತಡೆಹಿಡಿಯಲಾಗಿದೆ. ಯಾಕೆಂದರೆ ಅವರು ಒಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಹೊಸ ಎಫ್‌ಐಆರ್‌ನಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತಿದೆ. ಆದರೆ ಈ ಹೊಸ ಪ್ರಕರಣಗಳ ವಿಷಯವು ಹಳೆಯ ಎಫ್‌ಐಆರ್‌ ಅನ್ನು ಹೋಲುತ್ತದೆ ಎಂದು ತೋರುತ್ತಿದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಧಾರ್ಮಿಕ ಭಾವನೆಗಳಿಗೆ ನೋವು ಮಾಡಿರುವ ಆರೋಪದ ಮೇಲೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ತುರ್ತು ಪಟ್ಟಿ ಮಾಡಬೇಕು ಎಂದು ಸೋಮವಾರ ಜುಬೇರ್‌ ಕೋರಿದ್ದರು.

ಅರ್ಜಿದಾರರು, ಫ್ಯಾಕ್ಟ್‌ಚೆಕ್ಕರ್‌ ಮತ್ತು ಪತ್ರಕರ್ತರಾಗಿದ್ದು ಹಲವಾರು ಎಫ್‌ಐಆರ್‌ಗಳನ್ನು ಎದುರಿಸುತ್ತಿದ್ದಾರೆ. ಅವರ ಮನವಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಜುಬೇರ್‌ ಪರವಾಗಿ ಹಾಜರಾದ ವಕೀಲೆ ವೃಂದಾ ಗ್ರೋವರ್ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಗಮನಿಸಿದೆ. “ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಪಟ್ಟಿ ಮಾಡಿ. ಆ ಪೀಠದ ಮುಂದೆ ನೀವು ಪ್ರಕರಣಗಳನ್ನು ಪ್ರಸ್ತಾಪಿಸಬಹುದು” ಎಂದು ಸಿಜೆಐ ಪೀಠ ಹೇಳಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ನ ಹೊಸ ಮನವಿಯು ಆರು ಪ್ರಕರಣಗಳ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆಯನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ದಾಖಲಾಗಿರುವ ಎಲ್ಲಾ ಆರು ಎಫ್‌ಐಆರ್‌ಗಳನ್ನು ತನಿಖೆಗಾಗಿ ಎಸ್‌ಐಟಿಗೆ ವರ್ಗಾಯಿಸಲಾಗಿದ್ದು, ದೆಹಲಿ ಪೊಲೀಸ್ ವಿಶೇಷ ಸೆಲ್‌ ಕೂಡಾ ಅದೇ ಎಫ್‌ಐಆರ್‌ನ ವಿಷಯದ ಮೇಲೆ ತನಿಖೆ ನಡೆಸುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...