Homeರಾಷ್ಟ್ರೀಯಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಪ್ರಕರಣವನ್ನು ಜುಲೈ 27 ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನ ಪ್ರಕರಣದ ಕುರಿತಂತೆ ದೆಹಲಿ ಪೊಲೀಸರು ಟ್ವಿಟರ್‌ಗೆ ಶುಕ್ರವಾರ ನೋಟಿಸ್ ಕಳುಹಿಸಿದ್ದು, ‘ಹನುಮಾನ್ ಭಕ್ತ್‌‌@balajikijaiin’ ಖಾತೆಯ ವಿವರಗಳನ್ನು ನೀಡುವಂತೆ ಕೇಳಿದ್ದಾರೆ. ಈ ಖಾತೆಯೂ, 2018 ರಲ್ಲಿ ಜುಬೇರ್‌ ಪೋಸ್ಟ್ ಮಾಡಿದ ಟ್ವೀಟ್‌ ಅನ್ನು ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿತ್ತು. ಇದರ ನಂತರ ದೆಹಲಿ ಪೊಲೀಸರ ‘ಐಎಫ್‌ಎಸ್‌ಒ’ ಶಾಖೆ ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿ ಸೋಮವಾರ ಅವರನ್ನು ಬಂಧಿಸಿತ್ತು.

ಟ್ರಯಲ್ ಕೋರ್ಟ್ ನೀಡಿದ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಅವರಿಗೆ ನೀಡಲಾಗಿದ್ದ ನಾಲ್ಕು ದಿನಗಳ ರಿಮಾಂಡ್ ಆದೇಶವು ನಾಳೆ ಕೊನೆಗೊಳ್ಳುತ್ತದೆ, ಜುಲೈ 2 ರಂದು ಅವರನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನ್ಯಾಯಮೂರ್ತಿ ಸಂಜೀವ್ ನರುಲಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರು ಕಸ್ಟಡಿ ವಿಸ್ತರಣೆಗೆ ಪ್ರಯತ್ನಿಸುತ್ತಿದ್ದಾರೆಯೇ ಎಂದು ನನಗೆ ತಿಳಿದಿಲ್ಲ, ಬಹಷಃ… ಆರೋಪಿಯನ್ನು ಬಿಡುಗಡೆ ಮಾಡಬಹುದು ಅಥವಾ ನ್ಯಾಯಾಂಗ ಬಂಧನಕ್ಕೆ ಕಳುಹಿಸಬಹುದು. ನೀವು ಈ ವಿಚಾರಗಳನ್ನು ಟ್ರಯಲ್ ಕೋರ್ಟ್‌ನಲ್ಲಿ ಯಾಕೆ ಒತ್ತಾಯಿಸಬಾರದು?… ನೀವು ಪ್ರಕರಣದ ಕಾನೂನು ಬದ್ಧತೆಯ ಬಗ್ಗೆ ಮಾತನಾಡುತ್ತಿದ್ದರೆ, ನಾನು ನೋಟಿಸ್ ಜಾರಿ ಮಾಡಬೇಕು, ಇನ್ನೊಂದು ಕಡೆಯವರಿಗೆ ಕಳುಹಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಜುಬೇರ್‌ ವಿರುದ್ಧ ಸಲ್ಲಿಸಲಾದ ಪ್ರಕರಣದ ಬಗ್ಗೆ ಅಫಿಡವಿಟ್‌ ಸಲ್ಲಿಸಲು ನ್ಯಾಯಾಲಯವು ಎರಡು ವಾರಗಳ ಕಾಲಾವಕಾಶವನ್ನು ಪ್ರತಿವಾದಿಗಳಿಗೆ ನೀಡಿದೆ. ಪ್ರತಿವಾದಗಳು ಏನಾದರೂ ಇದ್ದರೆ, ಒಂದು ವಾರದೊಳಗೆ ಅವುಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದು, ಜುಲೈ 27 ರಂದು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.

ಸಿಆರ್‌ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಬುಧವಾರ ಸಂಜೆ ಟ್ವಿಟರ್‌ಗೆ ನೋಟಿಸ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. “ಅನಾಮಧೇಯ ಟ್ವಿಟರ್ ಹ್ಯಾಂಡಲ್ @balajikijaiin ನ ಐಪಿ ಲಾಗ್ ವಿವರಗಳು, ಖಾತೆಯ ನೋಂದಣಿ ವಿವರಗಳು, ಮೊಬೈಲ್ ಸಂಖ್ಯೆ, ಸಂಪರ್ಕಿತ ಇಮೇಲ್ ಐಡಿ ಮತ್ತು ಬಳಕೆದಾರರು ಬಳಸುವ ಸಾಧನವನ್ನು ಒದಗಿಸಲು ನಾವು ಅವರನ್ನು ಕೇಳಿದ್ದೇವೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರದಂದು ಈ ಖಾತೆಯನ್ನು ಅಳಿಸಲಾಗಿತ್ತು, ಆದರೆ ನಂತರ ಗುರುವಾರ ಸಂಜೆಯ ಹೊತ್ತಿಗೆ ಅದು ಮತ್ತೇ ವಾಪಾಸಾಗಿತ್ತು. ಈ ಬಗ್ಗೆ ಬುಧವಾರದಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, “ವ್ಯಕ್ತಿ ತನ್ನ ಖಾತೆಯನ್ನು ಅಳಿಸಿದ್ದಾನೆ ಎಂದು ನಮಗೆ ತಿಳಿದು ಬಂದಿದೆ. ಆದಾಗ್ಯೂ, ಇದು ನಮ್ಮ ತನಿಖೆಯ ಮೇಲೆ ಪರಿಣಾಮ ಬೀರುವುದಿಲ್ಲ. ಜುಬೈರ್ ಅವರ ಹಳೆಯ ಟ್ವೀಟ್ ವಿಚಾರವಾಗಿ ತನಿಖೆ ಮಾಡುತ್ತಿದ್ದೇವೆ. ನಾವು ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಮತ್ತು ದೂರಿನ ಬಗ್ಗೆ ಕೇಳುತ್ತೇವೆ. ಅವರು ಹೆದರಿ ಅಕೌಂಟ್ ಡಿಲೀಟ್ ಮಾಡಿರಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದು: ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ

ಮಂಗಳವಾರ ನಡೆದ ಜುಬೈರ್ ಅವರ ಬಂಧನದ ವಿಚಾರಣೆಯ ಸಂದರ್ಭದಲ್ಲಿ, ಟ್ವಿಟರ್ ಖಾತೆಯನ್ನು ನಡೆಸುತ್ತಿರುವ ವ್ಯಕ್ತಿ ‘ಅನಾಮಧೇಯನಲ್ಲ’ ಎಂದು ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದರು.

ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸವಾರಿಯಾ ಅವರ ಮುಂದೆ ರಿಮಾಂಡ್ ಅರ್ಜಿಯನ್ನು ವಿರೋಧಿಸಿದ ಜುಬೈರ್ ಅವರ ವಕೀಲೆ ವೃಂದಾ ಗ್ರೋವರ್, ಪ್ರಕರಣದಲ್ಲಿ ಇರುವ ಟ್ವಿಟರ್ ಖಾತೆಯು ಕಿಡಿಗೇಡಿತನವನ್ನು ಸೃಷ್ಟಿಸಲು ಮಾಡಿದ ಅನಾಮಧೇಯ ಹ್ಯಾಂಡಲ್ ಎಂದು ವಾದಿಸಿದ್ದರು.

ಈ ಟ್ವಿಟ್ಟರ್ ಖಾತೆಯನ್ನು ಜುಬೇರ್‌ ಅವರನ್ನು ಗುರಿಯಾಗಿಸಲು ಮಾಡಲಾಗಿದ್ದು, ಖಾತೆಯ ಬಳಕೆದಾರರನ್ನು ಪೊಲೀಸರು ತನಿಖೆ ಮಾಡಬೇಕು ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಆದರೆ ಇದನ್ನು ತಳ್ಳಿಹಾಕಿದ ಪೊಲೀಸರು, “ಅದು ಅನಾಮಧೇಯ ಟ್ವಿಟರ್ ಹ್ಯಾಂಡಲ್ ಅಲ್ಲ. ಅವರು ಕೇವಲ ಮಾಹಿತಿದಾರ. ಅವರು ಅನಾಮಧೇಯ ದೂರುದಾರರಲ್ಲ. ಅವರ ವಿವರಗಳು ಇಲ್ಲಿವೆ. ವಿವರಗಳಿಲ್ಲದೆ, ಯಾರೂ ಟ್ವಿಟರ್ ಖಾತೆಯನ್ನು ಪಡೆಯಲು ಸಾಧ್ಯವಿಲ್ಲ” ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...