Homeಮುಖಪುಟಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

ಅಜಿತ್ ದೋವಲ್‌ನ ಪುತ್ರನ ಪಾಕ್ ಉದ್ಯಮ ಸಂಬಂಧವನ್ನು ಬಿಜೆಪಿ ಏಕೆ ಆಕ್ಷೇಪಿಸಿಲ್ಲ: ಕಾಂಗ್ರೆಸಿನ ಗಂಭೀರ ಪ್ರಶ್ನೆ

- Advertisement -
- Advertisement -
ಭಯೋತ್ಪಾದನೆ ವಿರುದ್ಧ ಸಮರಕ್ಕಾಗಿ ಪಾಕಿಸ್ತಾನ ಜತೆಗಿನ ಎಲ್ಲಾ ಸಂಬಂಧ ಕಡಿದುಕೊಳ್ಳುವತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪುತ್ರ ಪಾಕಿಸ್ತಾನಿ ಮೂಲದ ಉದ್ಯಮ ಪಾಲುದಾರನನ್ನು ಹೊಂದಿದ್ದಾನೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ

“ಒಂದೆಡೆ ಪಾಕಿಸ್ತಾನದಲ್ಲಿ ಪಟಾಕಿ ಸಿಡಿಸಲಾಗುತ್ತದೆ (ಬಿಜೆಪಿ ಸೋತರೆ) ಎಂದು ಅಮಿತ್ ಶಾ ಹೇಳುತ್ತಾರೆ, ಇನ್ನೊಂದೆಡೆ, ಅಜಿತ್ ದೋವಲ್‌ರ ಪುತ್ರ ಶೌರ್ಯ ದೋವಲ್ ಪಾಕಿಸ್ತಾನಿ ವ್ಯಕ್ತಿ ಸೈಯದ್ ಆಲ್ ಅಬ್ಬಾಸ್ ಜತೆ ಉದ್ಯಮ ಸಹಭಾಗಿತ್ವ ಹೊಂದಿದ್ದಾನೆ. ಆತನ ಇನ್ನೊಬ್ಬ ಉದ್ಯಮ ಪಾಲುದಾರ ಸೌದಿ ಅರೇಬಿಯಾದ ವ್ಯಕ್ತಿ. ಇದಕ್ಕೆ ಅಮಿತ್ ಶಾ ಅವರಿಂದ ಯಾವುದೇ ಆಕ್ಷೇಪವೂ ಇಲ್ಲ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಕಟಕಿಯಾಡಿದ್ದಾರೆ.

ಮೋದಿ ಹಾಗೂ ಶಾ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಭಾಷೆ ಮತ್ತು ಸಭ್ಯತೆಯ ಬಗ್ಗೆ ಪಾಠ ಮಾಡಬೇಕಾದ ಅಗತ್ಯವಿಲ್ಲ, ಇಡೀ ದೇಶವೇ ಅವರ ನಮ್ರತೆ ಮತ್ತು ಶಿಷ್ಟಾಚಾರವನ್ನು ಮೆಚ್ಚಿಕೊಂಡಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಸುರ್ಜೇವಾಲಾ ಬಿಜೆಪಿ ಬಳಿ ಕೇಳಿದ ಪ್ರಶ್ನೆಗಳು:
  • 2016ರಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಪತ್ನಿ ಪಾಕಿಸ್ತಾನದಿಂದ ಮುಂಬೈಗೆ ಪ್ರಯಾಣಿಸಿದ್ದು ಹೇಗೆ ಮತ್ತು ರಾಜ್ಯ ಅಥವಾ ಕೇಂದ್ರ ಸರ್ಕಾರ ಆಕೆಯನ್ನು ಬಂಧಿಸಲಿಲ್ಲ ಯಾಕೆ?
  • ದಾವೂದ್ ಇಬ್ರಾಹಿಂ ಜತೆ ಮಾತನಾಡಿದ ಕಾರಣಕ್ಕೆ ಏಕನಾಥ್ ಖಾಡ್ಸೆ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂಬುದು ಸುಳ್ಳೇ?
  • ಬಿಜೆಪಿ ನಾಯಕರು ಹಾಗೂ ಸಚಿವರೂ ಆದ ಗಿರೀಶ್ ಮಹಾಜನ್ ಮತ್ತು ಶಾಸಕರಾದ ದೇವಯಾನಿ ಫರಂಡೆ, ಸೀಮಾ ಹೀರೆ ಮತ್ತು ಇತರೆ ಬಿಜೆಪಿ ನಾಯಕರು ನಾಸಿಕ್‌ನಲ್ಲಿ ಈ ವರ್ಷ ಮೇ 19ರಂದು ನಡೆದ ದಾವೂದ್‌ನ ಸೊಸೆಯ ಮದುವೆಯಲ್ಲಿ ಹೇಗೆ ಪಾಲ್ಗೊಂಡರು?
  • ವ್ಯೂಹಾತ್ಮಕ ವಾಯುಪಡೆಯ ನೆಲೆಯಾದ ಪಠಾಣ್‌ಕೋಟ್‌ಗೆ ಪಾಕಿಸ್ತಾನದ ಐಎಸ್ಐ ಅಧಿಕಾರಿಗಳನ್ನು ಸರ್ಕಾರ ಒಳಬಿಟ್ಟಿದ್ದು ಹೇಗೆ?
  • ಉಧಾಮ್‌ಪುರ ಹಾಗೂ ಗುರುದಾಸ್‌ಪುರದಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕ ದಾಳಿಗಳಾದ ಬಳಿಕವೂ ಆಹ್ವಾನರಹಿತ ಅತಿಥಿಯಾಗಿ ಪಾಕ್ ಪ್ರಧಾನಿ ನವಾಜ್ ಅವರ ಮೊಮ್ಮಗಳ ಮದುವೆಗಾಗಿ ಮೋದಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದು ಯಾಕೆ?
  • ಬಿಜೆಪಿಯ ಐಟಿ ಸೆಲ್‌ನಲ್ಲಿದ್ದ ಧ್ರುವ ಸಕ್ಸೇನಾ ನೇತೃತ್ವದಲ್ಲಿ 11 ಜನರು ಪಾಕಿಸ್ತಾನದ ಐಎಸ್ಐ ಪರವಾಗಿ ಗೂಢಚರ್ಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದು ಸುಳ್ಳೇ?
  • ಹಿಂದಿನ ಬಿಜೆಪಿ ಸರ್ಕಾರ ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಕಾಶ್ಮೀರಿ ಉಗ್ರ ಮುಶ್ತಕ್ ಝರ್‌ಗರ್ ಹಾಗೂ ಉಮರ್ ಸೈಯದ್ ಶೇಖ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ಕಂದಹಾರ್‌ಗೆ ಕರೆದೊಯ್ದದ್ದು ಸುಳ್ಳೇ?
  • ಹಿಜಬ್ ಉಗ್ರ ಬುರ್ಹಾನ್ ವಾನಿಯನ್ನು ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು ಮತ್ತು ಭದ್ರತಾ ಪಡೆಗಳು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು ಎಂದು ಜಮ್ಮು ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಹೇಳಿರಲಿಲ್ಲವೇ?
  • ವಾನಿಯ ಕುಟುಂಬಕ್ಕೆ ಉದ್ಯೋಗ ಹಾಗೂ ಪರಿಹಾರವನ್ನು ಜಮ್ಮು ಕಾಶ್ಮೀರದ ಪಿಡಿಪಿ-ಬಿಜೆಪಿ ಸರ್ಕಾರ ನೀಡಿದ್ದು ಸತ್ಯವಲ್ಲವೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...