ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ ಎಂದು ಸಿಎಂ ಯಡಿಯೂರಪ್ಪನವರು ಸ್ಷಷ್ಟಪಡಿಸಿದ್ದಾರೆ.
ಬೆಳಿಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಸುದ್ದಿಗೊಷ್ಟಿ ನಡೆಸಿ ಯಡಿಯೂರಪ್ಪನವರ ಸರ್ಕಾರವು ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳ ಹಣ ಕಡಿತ ಮಾಡುತ್ತಿದೆ. ಇದರು ಬಡಜನರ ವಿರೋಧಿ ಕ್ರಮವಾಗಿದ್ದು ಹಿಂತೆಗೆದುಕೊಳ್ಳದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಯಡಿಯೂರಪ್ಪನವರು ಸಿಎಂ ಆಫ್ ಕರ್ನಾಟಕ ಟ್ವಿಟ್ಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಜನಪರ ಯೋಜನೆಗಳನ್ನು ಮುಂದುವರೆಸುವುದಾಗಿಯೂ ಇಗಾಗಲೇ ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ.
ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಿದ್ದೇನೆ. pic.twitter.com/WMXt9QfGdC
— CM of Karnataka (@CMofKarnataka) August 17, 2019



OMG E POST MADIDIRA NIVU