Homeಚಳವಳಿಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಒಂದೇ ಊರಲ್ಲಿ ಪದೇ ಪದೇ ನಡೆಯುತ್ತಿರುವ ದಲಿತರ ಮೇಲಿನ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯಗಳು

ಈ ಊರಿನಲ್ಲಿ ನಾಲ್ಕು ವರ್ಷದಲ್ಲಿ ಎರಡು ಅತ್ಯಾಚಾರ, ಒಂದು ದಲಿತ ದೌರ್ಜನ್ಯ ಪ್ರಕರಣ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ದಲಿತ ಯುವಕನಿಗೆ ಸಾಮೂಹಿಕ ಥಳಿತ, ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಚಾರ.. ಇವಿಷ್ಟು ಘಟನೆಗಳು ನಾಲ್ಕು ವರ್ಷಗಳ ಅವಧಿಯಲ್ಲಿ ಒಂದೇ ಪ್ರದೇಶದಲ್ಲಿ ನಡೆದಿರುವುದು ಆಡಳಿತ ಯಂತ್ರಾಂಗ ಸಂಪೂರ್ಣ ಕುಸಿದಿರುವುದರ ಜೊತೆಗೆ ಮೇಲ್ಜಾತಿ ಫ್ಯೂಡಲ್ ಗಳ ಅಟ್ಟಹಾಸ ಮುಂದುವರೆದಿರುವುದರ ಸ್ಪಷ್ಟ ನಿದರ್ಶನವಾಗಿದೆ. ಎಲ್ಲಿದೆ ಜಾತಿ ಎಂಬುವವರು ಇದಕ್ಕೇನು ಹೇಳುತ್ತಾರೆ?

9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮೇ 30ರ ಗುರುವಾರ ಉತ್ತರಖಂಡದ ತೆಹ್ರಿಯಲ್ಲಿ ನಡೆದಿದೆ. ಆರೋಪಿ ನಿತಿನ್ ಸಿಂಗ್ ಪವಾರ್ (28) ಮೇಲ್ಜಾತಿಗೆ ಸೇರಿದವನಾಗಿದ್ದು, ಪೊಲೀಸರು ಇವನನ್ನು ಈಗಾಗಲೇ ಬಂಧಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾಲ್ಕು ವರ್ಷಗಳ ಹಿಂದೆ ಇದೇ ಬಾಲಕಿಯ ಸಂಬಂಧಿಯೊಬ್ಬಳನ್ನು ಮೇಲ್ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಘಟನೆಯೂ ಇದೇ ಊರಲ್ಲಿ ನಡೆದಿತ್ತು ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಲಿತ ಯುವಕನೊಬ್ಬ ಮದುವೆ ಸಮಾರಂಭವೊಂದರಲ್ಲಿ ಮೇಲ್ಜಾತಿ ಸಮುದಾಯದವರೊಂದಿಗೆ ಊಟ ಮಾಡಿದ ಎಂಬ ಆಕ್ರೋಶದಿಂದ ಯುವಕನನ್ನು ಸಾಯುವ ಹಾಗೆ ಹೊಡೆದಿದ್ದ ಘಟನೆಯೂ ಇತ್ತೀಚೆಗೆ ಇದೇ ಪ್ರದೇಶದ ನೈನಿಭಾಗ್ ನಲ್ಲಿ ನಡೆದಿತ್ತು.

ಪ್ರಸ್ತುತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಕೆಂಪ್ತಿ ಪೊಲೀಸ್ ಠಾಣೆ ಅಧಿಕಾರಿ ಎಂ.ಎಲ್. ಜಖ್ಮೋಲ್ “ ಈ ಘಟನೆ ಗುರುವಾರ ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದ್ದು, ಬಾಲಕಿಯ ಪೋಷಕರು ಕೂಲಿ ಕೆಲಸಕ್ಕೆ ಹೋಗಿದ್ದರು. ಬಾಲಕಿಯು ನೀರು ತರಲು ಹೋದ ಸಮಯದಲ್ಲಿ ಘಟನೆ ನಡೆದಿದೆ.  ಆರೋಪಿಯು ಬಾಲಕಿಯ ಮನೆ ಹತ್ತಿರವೇ ಅಂಗಡಿಯೊಂದನ್ನು ನಡೆಸುತ್ತಿದ್ದು, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ’ ಎಂದಿದ್ದಾರೆ.

‘ತುಂಬಾ ಸಮಯದ ಬಳಿಕೆ ಬಾಲಕಿಯು ಅಳುತ್ತಾ ಮನೆಗೆ ಬಂದದ್ದನ್ನು ನೋಡಿ ಪೋಷಕರು ಕಾರಣ ಕೇಳಿದಾಗ ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾರೆ. ಗುರುವಾರ ಸಂಜೆಯೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಅದೇ ದಿನ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ’ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸದ್ಯಕ್ಕೆ ಭಾರತೀಯ ನೀತಿ ಸಂಹಿತೆ ಪ್ರಕಾರ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಹಾಗೂ ಎಸ್ ಸಿ/ಎಸ್ ಟಿ ಅಟ್ರಾಸಿಟಿ ಕಾಯ್ದೆ ಅಡಿ ದೂರು ದಾಖಲಾಗಿದೆ. ಆದರೆ ಪದೇ ಪದೇ ಈ ರೀತಿಯ ಅತ್ಯಾಚಾರ, ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿದ್ದರೂ ಇಲ್ಲಿನ ಪೊಲೀಸ್ ಮತ್ತು ನಾಗರೀಕ ಸಮಾಜ ಕಣ್ಣು ಮಚ್ಚಿ ಕುಳಿತಿರುವುದೇಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ಜಾತಿ ಪದ್ದತಿ ಮತ್ತು ಜಾತಿ ದೌರ್ಜನ್ಯ ಇಂದಿಗೂ ಜಾರಿಯಲ್ಲಿರುವುದರ ಸ್ಪಷ್ಟ ಉದಾಹರಣೆ ಇದಾಗಿದ್ದು ಇದನ್ನು ತಡೆಯಲು ಪ್ರಭುತ್ವ ಮತ್ತು ಸರ್ಕಾರಗಳು ಇಚ್ಛಾಶಕ್ತಿ ಪ್ರದರ್ಶಿಸಿಲ್ಲ ಎಂಬುದು ಈ ಪ್ರಕರಣಗಳಿಂದ ಕಂಡುಬಂದಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ಥರು ದಲಿತರಾಗಿದ್ದು ಆರೋಪಿಗಳು ಸವರ್ಣಿಯ ಜಾತಿಯವರಾಗಿದ್ದಾರೆ. ತಮ್ಮ ಜಾತಿ ಬಲ, ಅಧಿಕಾರ ಬಲ ಬಳಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಸಹ ಪದೇ ಪದೇ ಇಂತಹ ಘೋರ ಘಟನೆಗಳು ಜರುಗಲು ಕಾರಣವಾಗಿದೆ.

ಈ ರೀತಿಯ ಘಟನೆಗಳು ನವಭಾರತದಲ್ಲಿ ಮುಂದುವರೆಯುತ್ತಿರುವುದು ಮಾನವಕುಲಕ್ಕೆ ನಾಚಿಕೆಗೇಡಿನ ಸಂಗತಿಯಾಗಿದ್ದು ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ದನಿಯೆತ್ತದೆ ಇದಕ್ಕೆ ಪರಿಹಾರವಿಲ್ಲ. ಅಂತಹ ದಿಟ್ಟ ಹೋರಾಟ ಆದಷ್ಟು ಬೇಗ ಮೂಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...