Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ರಗಳೆ…

ಕನ್ನಡ ಸಾಹಿತ್ಯ ಪರಿಷತ್ ರಗಳೆ…

- Advertisement -
- Advertisement -

ಒಂದುಕಾಲಕ್ಕೆ ಕನ್ನಡಿಗರೆಲ್ಲರ ಆತ್ಮಾಭಿಮಾನದ ಪ್ರತೀಕದಂತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಸಲ್ಲದ ಅವಾಂತರಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಪೂರ್ಣಕುಂಭದ ಕುರಿತಂತೆ ಎದ್ದಿದ್ದ ವಿವಾದ ಮಾಸುವ ಮುನ್ನವೇ ಇದೀಗ ಅಜೀವ ಸದಸ್ಯರೊಬ್ಬರು ಸಾಮುದಾಯಿಕ ಪ್ರತಿರೋಧದ ಪ್ರತೀಕವಾಗಿ ನೀಡಿದ್ದ ರಾಜೀನಾಮೆಯನ್ನು ಕಸಾಪ ಅಧ್ಯಕ್ಷರು ಅಂಗೀಕರಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಮತ್ತೆ ಸುದ್ದಿಗೆ ಬಂದಿದೆ. ನ್ಯಾಯಪಥ ಪತ್ರಿಕೆಯು ಈ ಕುರಿತ ಚರ್ಚೆಯನ್ನು ಇಲ್ಲಿ ಶುರು ಮಾಡುತ್ತಿದೆ. ರೂಪಾ ಹಾಸನ್ ಅವರು ತಮ್ಮ ಅಜೀವ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಪತ್ರ, ಕಸಾಪ ಅಧ್ಯಕ್ಷರ ಈ ಕ್ರಮ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಸಂಚಾಲಕ ಲಿಂಗೇಶ್ ಅವರು ಬರೆದ ಬಹಿರಂಗ ಪತ್ರ, ಕಥೆಗಾರ ಹನುಮಂತ ಹಾಲಗೇರಿಯವರ ಒಟ್ಟಾರೆ ಒಳನೋಟ ಹಾಗೂ ಈ ವಿವಾದದ ಬಗ್ಗೆ ಸ್ವತಃ ಮನುಬಳಿಗಾರರು ನೀಡಿದ ಪುಟ್ಟ ಪ್ರತಿಕ್ರಿಯೆಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಈ ಚರ್ಚೆಗೆ ಪ್ರತಿಕ್ರಿಯಿಸ ಬಯಸುವವರು ತಮ್ಮ ಅಭಿಪ್ರಾಯವನ್ನು ಪತ್ರಿಕೆಯ ಇಮೇಲ್ ಐಡಿ [email protected] ಗೆ ಕಳುಹಿಸಬಹುದು. ಪ್ರತಿಷ್ಠೆಗಳ ಕಾದಾಟಕ್ಕಿಂತ ಒಂದು ಆರೋಗ್ಯಕರ ಚರ್ಚೆ ಮಾತ್ರ ಕನ್ನಡಿಗರ ಈ `ಆತ್ಮಾಭಿಮಾನ’ವನ್ನು ವಿವಾದಗಳ ಹುತ್ತದಿಂದ ಹೊರಗೆಳೆದು ತರಬಲ್ಲದು ಎಂಬುದಷ್ಟೇ ಪತ್ರಿಕೆಯ ಆಶಯ…

ಶ್ರೀ ಮನು ಬಳಿಗಾರ್

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು,

ಬೆಂಗಳೂರು.

– ಇವರಿಗೆ

ಮಾನ್ಯರೇ,

ವಿಷಯ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ [ಸಂಖ್ಯೆ-44892]

ರಾಜೀನಾಮೆ ನೀಡುವ ಕುರಿತು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತದ್ದು. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿ ಪರಿಷತ್ತಿನ ಉದ್ದೇಶವಾಗಿರತಕ್ಕುದೆಂದು ನಿಬಂಧನೆಯಲ್ಲಿ ಘೋಷಿಸಲಾಗಿದೆಯಷ್ಟೇ.

ಆದರೆ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಮರೆತು ಲಕ್ಷ, ಕೋಟಿಗಟ್ಟಲೆ ಹಣ ವ್ಯಯಿಸುತ್ತಾ ಅಖಿಲ ಭಾರತ, ಜಿಲ್ಲಾ, ತಾಲ್ಲೂಕು, ಹೋಬಳಿ ಸಮ್ಮೇಳನಗಳನ್ನು, ಅದ್ಧೂರಿ ಕಾರ್ಯಕ್ರಮಗಳನ್ನು ವರ್ಷವಿಡೀ, ರಾಜ್ಯಾದ್ಯಂತಾ ಆಯೋಜನೆ ಮಾಡುವುದರಲ್ಲೇ ಕಳೆದು ಹೋಗುತ್ತಿದೆ. ಕನ್ನಡ ನಾಡು-ನುಡಿಗೆ ಒದಗಿರುವ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲೂ ಪರಿಷತ್ತಿನ ಅದ್ಧೂರಿತನ, ನಾಡು ನುಡಿಯ ಜ್ವಲಂತ ಸಮಸ್ಯೆಗಳಿಗೆ ಕೇವಲ ತುಟಿ ಮರುಕ ತೋರಿ ಗಟ್ಟಿ ನಿಲುವು ತೆಗೆದುಕೊಳ್ಳದೇ, ಕನ್ನಡಿಗರೆಲ್ಲರ ಪರವಾಗಿ ನಿರ್ಣಾಯಕ ಪಾತ್ರವಹಿಸದೇ, ರಚನಾತ್ಮಕ ಕೆಲಸಗಳಲ್ಲಿ ತೊಡಗಿಕೊಳ್ಳದೇ, ಆಂದೋಲನವನ್ನು ಕಟ್ಟದೇ… ಅದ್ಧೂರಿ, ವೈಭವದ ಸಮ್ಮೇಳನಗಳಲ್ಲಿ ಮುಳುಗಿರುವುದು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆಯಂತಾಗಿರುವುದು ವಿಪರ್ಯಾಸವೇ ಸರಿ.

ಜೊತೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ, ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಪಡೆದು ಅದ್ಧೂರಿ ಸಮ್ಮೇಳನಗಳನ್ನು, ಕಾರ್ಯಕ್ರಮಗಳನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಆಯೋಜಿಸುವ ಸಾಹಿತ್ಯ ಪರಿಷತ್ತು ಮತ್ತದರ ಘಟಕಗಳು ತಾನು ಮಾಡುತ್ತಿರುವ ದುಂದು ವೆಚ್ಚದ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗಾಗಲೀ, ಕನಿಷ್ಠ ತನ್ನ ಸದಸ್ಯರಿಗಾಗಲೀ ಬಿಡುಗಡೆ ಮಾಡದೇ, ತನ್ನೊಳಗೇ ಗುಟ್ಟಾಗಿಟ್ಟುಕೊಳ್ಳುವ ಪರಿ ಅವ್ಯವಹಾರದ ಗುಮಾನಿಯನ್ನು ಹೆಚ್ಚಿಸುವ ಜೊತೆಗೆ ಇದು ಎಲ್ಲ ರೀತಿಯಲ್ಲೂ  ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯ ಅಪ್ರಜಾಪ್ರಭುತ್ವವಾದಿ ನಿಲುವಾಗಿದೆ.

ಎಲ್ಲಕ್ಕಿಂತಾ ಮುಖ್ಯವಾಗಿ ಕನ್ನಡ ಶಾಲೆಗಳನ್ನು ವ್ಯವಸ್ಥಿತವಾಗಿ ಕತ್ತು ಮಿಸುಕಿ ಸಾಯಿಸಲಾಗುತ್ತಿದೆ. ಕನಿಷ್ಠ ಪ್ರಾಥಮಿಕ ಶಿಕ್ಷಣದಲ್ಲಾದರೂ ಕನ್ನಡ ಮತ್ತು ಇತರೇ ಮಾತೃಭಾಷೆಗಳು ಶಿಕ್ಷಣ ಮಾಧ್ಯಮವಾಗದಿದ್ದರೇ ಕನ್ನಡವೋ ಇತರ ಮಾತೃಭಾಷೆಗಳೋ ಹೇಗೆ ಉಳಿದೀತು? ಇದನ್ನು ಆಗುಮಾಡುವುದು ತನ್ನ ಉಸಿರು  ಎಂದು ಕೊಳ್ಳಬೇಕಾದ ಕನ್ನಡ  ಸಾಹಿತ್ಯ ಪರಿಷತ್ತು, ಕೇವಲ ಕಾಟಾಚಾರಕ್ಕೆ ಸರ್ಕಾರಗಳಿಗೆ ಪತ್ರ ಬರೆದು, ಮತ್ಯಾವ  ರಚನಾತ್ಮಕ  ಪ್ರಯತ್ನವನ್ನೂ  ಮಾಡದೇ, ಕೇವಲ ಸಮ್ಮೇಳನಗಳನ್ನು ಮಾಡಿ ಅಲ್ಲಿ ಕನ್ನಡ ಭಾಷೆ/ಶಾಲೆಯ ಪರವಾಗಿ ಪುಂಖಾನುಪುಂಖವಾಗಿ ಭಾಷಣ ಮಾಡಿಸಿ, ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕಷ್ಟೇ ಸಿಮಿತವಾಗಿರುವುದು ಕನ್ನಡ ನಾಡು, ನುಡಿಯ ಅಣಕದಂತೆ ತೋರುತ್ತಿದೆ.

ಇವೇ ಕಾರಣಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯಳಾಗಿ ಮುಂದುವರೆಯುವುದು ನನಗೆ ಅಸಹನೀಯವೆನಿಸುತ್ತಿರುವುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ತಮಗೆ ಕಳಿಸುತ್ತಿದ್ದೇನೆ. ದಯಮಾಡಿ ಈಗ್ಗೆ 15 ವರ್ಷಗಳ ಹಿಂದೆ ಪಡೆದಿದ್ದ ಪರಿಷತ್ತಿನ ನನ್ನ ಸದಸ್ಯತ್ವವನ್ನು[ಸದಸ್ಯತ್ವ ಸಂಖ್ಯೆ-44892] ರದ್ದುಪಡಿಸುವ ಜೊತೆಗೆ ಕಸಾಪ ಚುನಾವಣೆಯ ಅರ್ಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ.

ಈ  ಕುರಿತು ತಮ್ಮಿಂದ ಶೀಘ್ರ ಉತ್ತರದ ನಿರೀಕ್ಷೆಯಲ್ಲಿರುವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ

ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...