Homeಚಳವಳಿಜೈ ಹಿಂದ್ ಹೇಳುವಂತೆ ಒತ್ತಾಯಿಸಿದ ಹುಡುಗಿಗೆ ಕನ್ಹಯ್ಯ ಕುಮಾರ್ ಕೊಟ್ಟ ಸೊಗಸಾದ ಉತ್ತರ

ಜೈ ಹಿಂದ್ ಹೇಳುವಂತೆ ಒತ್ತಾಯಿಸಿದ ಹುಡುಗಿಗೆ ಕನ್ಹಯ್ಯ ಕುಮಾರ್ ಕೊಟ್ಟ ಸೊಗಸಾದ ಉತ್ತರ

- Advertisement -
- Advertisement -

ಯುವತಿಯ ಪ್ರಶ್ನೆಯ ಸಾರಾಂಶ: ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ನೀವು ಒಮ್ಮೆಯಾದರೂ ಜೈ ಹಿಂದ್, ಜೈ ಹೇಳಿಬಿಡಿ. ನೀವೇಕೆ ಏಕರಾಷ್ಟ್ರದ ವಿರುದ್ಧ ಇದ್ದೀರಿ, ಅದನ್ನೂ ವಿವರಿಸಿ.

ಕನ್ಹಯ್ಯ ಕುಮಾರ್ ನೀಡಿದ ಉತ್ತರ

ನೀವು ಏಕದ ಕುರಿತು ಹೇಳುತ್ತಿದ್ದೀರಿ. ಏಕೆ ‘ಏಕೈಕ’ವನ್ನು ಪ್ರಚಾರ ಮಾಡೋದಿಲ್ಲ, ಅದನ್ನೇಕೆ ಒಪ್ಪಿಕೊಳ್ಳೋದಿಲ್ಲ ಅಂತ ಕೇಳ್ತಿದ್ದೀರಿ. ಆದರೆ ನಾನೇನು ಮಾಡಲಿ? ನಾನು ಹುಟ್ಟಿದ್ದು ಇಬ್ಬರ ಸಂಯೋಗದಿಂದ. ನನ್ನ ಅಪ್ಪ ಮತ್ತು ಅಮ್ಮ ಇಬ್ಬರು ಮದುವೆಯಾಗಿದ್ದರಿಂದ ನಾನು ಹುಟ್ಟಿದೆ. ಯಾರೋ ಒಬ್ಬರಿಂದ ನಾನು ಹುಟ್ಟುವುದು ಅಸಾಧ್ಯವಿತ್ತು. ಅಲ್ಲಿ ಅಪ್ಪ ಮತ್ತು ಅಮ್ಮ ಇಬ್ಬರಿದ್ದರು.

ನೀವು ಏಕರಾಷ್ಟ್ರದ ಪರಿಕಲ್ಪನೆಯನ್ನು ನಾನೇಕೆ ಬೆಂಬಲಿಸೋದಿಲ್ಲ ಅಂತ ಕೇಳ್ತಿದ್ದೀರಿ. ರಾಷ್ಟ್ರ ಯಾವತ್ತಿಗೂ ಒಂದೇ. ಭಾರತ ಇರುವುದು ಒಂದೇ, ಇದರಲ್ಲಿ ಸಂದೇಹವಿಲ್ಲ. ಆದರೆ, ಈ ಏಕಭಾರತವನ್ನು ಪ್ರತಿನಿಧಿಸುವ ಒಂದು ಸಂವಿಧಾನ ಏನಿದೆ, ಅದರಲ್ಲಿ 300ಕ್ಕಿಂತ ಹೆಚ್ಚು ವಿಧಿಗಳಿವೆ. ಮತ್ತು ನೀವು ಹೇಳುತ್ತಿರುವ ಏಕರಾಷ್ಟ್ರವನ್ನು ಪ್ರತಿನಿಧಿಸಲು ಇರುವ ಒಂದು ಸಂಸತ್ತು ಏನಿದೆ, ಅದರಲ್ಲೂ ಎರಡು ಸದನಗಳಿವೆ- ಲೋಕಸಭೆ ಮತ್ತು ರಾಜ್ಯಸಭೆ. ಮತ್ತು ಅದಕ್ಕೆ ಚುನಾಯಿತರಾಗಿ ಹೋಗುವುದು ಯಾರೋ ಒಬ್ಬರಲ್ಲ, ಪೂರಾ 545 ಸದಸ್ಯರು!

ಆದ್ದರಿಂದ ನಾವು ಪ್ರತಿಪಾದಿಸುವ ಏಕತೆ ಏನಿದೆ, ಅದು ವಿವಿಧತೆಯನ್ನು ಪ್ರತಿನಿಧಿಸುವಂಥದ್ದು. ಅಲ್ಲಿ ವೈವಿಧ್ಯತೆ ಇದೆ. ನೀವು ಜೈ ಶ್ರೀರಾಮ್ ಘೋಷಣೆ ಕುರಿತು ಹೇಳಿದಿರಿ. ನೀವು ಖಂಡಿತವಾಗಿ ಘೋಷಣೆ ಹಾಕಿ, ಅದು ನಿಮ್ಮ ಸ್ವಾತಂತ್ರ್ಯ. ನೀವು ಜೈ ಶ್ರೀರಾಮ್ ಬೇಕಾದರೂ ಅನ್ನಿ, ಜೈ ಹನುಮಾನ್ ಬೇಕಾದರೂ ಅನ್ನಿ. ನಿಮಗೆ ಬೇಕಾದ ಘೋಷಣೆ ಕೂಗುವ ಸ್ವಾತಂತ್ರ್ಯವನ್ನು ನಮ್ಮ ಸಂವಿಧಾನ ನೀಡಿದೆ. ಆದ್ದರಿಂದ ನಾನು ನಿಮ್ಮಲ್ಲಿ ಆಗ್ರಹಿಸುತ್ತೇನೆ, ನಿಮಗೆ ನಿಮ್ಮ ಘೋಷಣೆ ಕೂಗುವ ಸ್ವಾತಂತ್ರ್ಯ ನೀಡಿರುವ ಸಂವಿಧಾನಕ್ಕೂ ಒಮ್ಮೆ ಜೈಕಾರ ಹಾಕಿಬಿಡಿ.

ಇನ್ನು, ನಾನು ಜೈಶ್ರೀರಾಮ್ ಘೋಷಣೆ ಕೂಗುವ ಬಗ್ಗೆ,… ನಾನು ಹುಟ್ಟಿದ್ದೇ ಮಿಥಿಲೆಯಲ್ಲಿ. ನನ್ನ ಊರು ಬೇಗುಸರಾಯ್ ಮಿಥಿಲಾ ಪ್ರಾಂತ್ಯಕ್ಕೆ ಸೇರುತ್ತದೆ. ನಿಮಗೆ ಗೊತ್ತಿರಬಹುದು, ಮಿಥಿಲೆ ಶ್ರೀರಾಮನ ಮಾವನ ಮನೆ. ನಮ್ಮ ಊರಲ್ಲಿ ಪ್ರತಿವರ್ಷ ಸೀತಾ ರಾಮರ ವಿವಾಹ ಮಹೋತ್ಸವ ನಡೆಸುತ್ತಾರೆ. ಅಯೋಧ್ಯೆಯಿಂದ ತರುಣರು ರಾಮನ ವೇಷದಲ್ಲಿ ನಮ್ಮ ಊರಿಗೆ ಮೆರವಣಿಗೆ ಬರುತ್ತಾರೆ. ನಾವು ಹೆಣ್ಣಿನ ಕಡೆಯವರು. ಅವರು ಗಂಡಿನ ಕಡೆಯವರು. ನಮ್ಮ ಪ್ರಾಂತ್ಯದಲ್ಲಿ ಬೀಗರನ್ನು ಬೈಗುಳದ ಮೂಲಕ ಸ್ವಾಗತಿಸುವ ಪದ್ಧತಿ ಇದೆ. ನಾವು ರಾಮನನ್ನು ನಿಂದಿಸುತ್ತಾ ಸ್ವಾಗತ ಕೋರುತ್ತೇವೆ. ರಾಮನನ್ನು ಹಾಸ್ಯ ಮಾಡುತ್ತೇವೆ. ಇದು ನಮ್ಮಲ್ಲಿ ಪಾರಂಪರಿಕವಾಗಿ ನಡೆದು ಬಂದ ರೂಢಿ. ಇದು ನಮ್ಮ ನೆಲದ ಸಂಸ್ಕೃತಿ.

ಅದೂ ಅಲ್ಲದೆ ನಾನು ಹುಟ್ಟಿ ಬೆಳೆದ ಸಂಸ್ಕೃತಿಯಲ್ಲಿ ಯಾವ ದೇವರನ್ನೂ ಏಕವಾಗಿ ಸ್ಮರಿಸುವುದಿಲ್ಲ. ರಾಮನನ್ನು ಸೀತಾರಾಮ ಎಂದೂ ಕೃಷ್ಣನನ್ನು ರಾಧಾಕೃಷ್ಣ ಎಂದೂ ಜೋಡಿಯಾಗಿ ಸ್ಮರಿಸುತ್ತಾರೆ, ಪೂಜಿಸುತ್ತಾರೆ. ಇದು ನಾನು ಬೆಳೆದ ನೆಲದ ಪರಂಪರೆ. ನನ್ನ ಪರಿಸರದ ಸಂಸ್ಕೃತಿ.

ನೀವೇನಾದರೂ ಪಿಎಚ್ಡಿ ಮಾಡುವುದಾದರೆ, ಈ ದೇಶದಲ್ಲಿ ಎಷ್ಟು ರಾಮಾಯಣಗಳಿವೆಯೋ ಅವುಗಳ ಮೇಲೆ ಸಂಶೋಧನೆ ಮಾಡಿ. ನನಗೆ ತಿಳಿದಿರುವಂತೆ ಈ ದೇಶದಲ್ಲಿ ಮುನ್ನೂರಕ್ಕೂ ಹೆಚ್ಚು ರಾಮಾಯಣಗಳಿವೆ.

ನಾನೊಮ್ಮೆ ಹಿಮಾಚಲಕ್ಕೆ ಹೋಗಿದ್ದೆ. ಅಲ್ಲಿ ತ್ರಿಲೋಕನಾಥ ಮಂದಿರವಿದೆ. ನೀವು ಈ ದೇಶವನ್ನು ಸುತ್ತಾಡಬೇಕು. ಆಗ ನಿಮಗೆ ಈ ದೇಶದ ನಿಜ ಸೌಂದರ್ಯ ತಿಳಿಯುತ್ತದೆ. ನಮ್ಮ ದೇಶದ ಅಗಾಧತೆ ಎದುರು ನಾವೆಷ್ಟು ತುಚ್ಛರು ಅನ್ನುವುದು ಅರ್ಥವಾಗುತ್ತದೆ.

ಈ ತ್ರಿಲೋಕನಾಥ ಮಂದಿರದಲ್ಲಿ ಭಗವಾನ್ ಬುದ್ಧನ ಮೂರ್ತಿ ಇದೆ. ಅದರ ತಲೆಮೇಲೆ ಶಿವನ ಮೂರ್ತಿನ್ನು ಇರಿಸಲಾಗಿದೆ. ಈ ಮಂದಿರಕ್ಕೆ ಮೊದಲು ಹಿಂದೂ ಸಾಧು ಬರುತ್ತಾರೆ. ಪ್ರಾರ್ಥನೆ ನಡೆಸುತ್ತಾರೆ. ಅದಾದ ನಂತರ ಬೌದ್ಧ ಬಿಕ್ಖು ಬರುತ್ತಾರೆ, ಅಲ್ಲಿ ಪ್ರದಕ್ಷಿಣೆ ನಮಸ್ಕಾರ ಹಾಕುತ್ತಾರೆ. ಇದು ಈ ದೇಶದ ವೈಶಿಷ್ಟ್ಯ. ಇದು ಹಿಂದೂಸ್ಥಾನದ ವೈಶಿಷ್ಟ್ಯ.

ಲಾಹೋರ್ ಜಿಲ್ಲೆಯಲ್ಲಿ ಒಂದು ರಾಮಾಯಣ ಪ್ರಚಲಿತದಲ್ಲಿದೆ. ಅದು ಲಾಹೋಲಿ ಭಾಷೆಯಲ್ಲಿದೆ. ಆ ರಾಮಾಯಣದಲ್ಲಿ ರಾವಣ ಸೀತೆಯನ್ನು ಅಪಹರಿಸುವುದಿಲ್ಲ, ಬದಲಿಗೆ, ಸೀತೆ ರಾವಣನ ಮಗಳು! ಮತ್ತು ರಾಮ ಸೀತೆಯನ್ನು ಪ್ರೇಮಿಸಿ ಮದುವೆಯಾಗುತ್ತಾನೆ. ಈ ಕಾರಣದಿಂದ ರಾಮ ರಾವಣರ ಯುದ್ಧ ನಡೆಯುತ್ತದೆ. ಇದು ಲಾಹೋಲಿ ರಾಮಾಯಣ ಹೇಳುವ ಕಥೆ. ಇದು ಹಿಂದೂಸ್ಥಾನದ ವೈಶಿಷ್ಟ್ಯ.

ಇಂಥವನ್ನೆಲ್ಲ ಯಾರು, ಯಾಕಾಗಿ ನಿಮ್ಮ ತಲೆಯೊಳಗೆ ತುಂಬಿದ್ದಾರೋ ನನಗೆ ಗೊತ್ತಿಲ್ಲ. ಈ ದೇಶದಲ್ಲಿ ಜನಿಸುವುದೇ ಒಂದು ಗೌರವದ ವಿಷಯ. ನೀವು ಹಿಮಾಚಲಕ್ಕೆ ಹೋದರೆ ನಿಮಗೆ ಸ್ವಿಟ್ಜರ್ಲೆಂಡಿಗೆ ಹೋದ ಅನುಭವವಾಗುತ್ತದೆ. ಗೋವಾ ಅಥವಾ ಮಂಗಳೂರು ಸಮುದ್ರ ತೀರಕ್ಕೆ ಬಂದರೆ, ಮಿಯಾಮಿ ಬೀಚ್’ನಲ್ಲಿ ಮಲಗಿರುವ ಅನುಭವವಾಗುತ್ತದೆ. ಈ ದೇಶದ ಮೈದಾನಗಳಲ್ಲಿ ಅಲೆದಾಡಿದರೆ, ಅವು ಅಮೆರಿಕಾದ ಹಸಿರುಮೈದಾನಗಳಿಗಿಂತ ಎಷ್ಟು ಅಗಾಧವಾಗಿದೆ ಅನ್ನೋದು ತಿಳಿಯುತ್ತದೆ. ಆದರೂ ಒಟ್ಟಾರೆಯಾಗಿ ಇದು ಒಂದು ದೇಶ. ಇದು ನಮ್ಮ ದೇಶ.

ನಿಮ್ಮ ದೇಶ ನಿಮ್ಮದು. ನಿಮ್ಮ ತಾಯಿ ನಿಮ್ಮವಳು. ನೀವು ನಿಮ್ಮ ತಾಯಿಯನ್ನು ಪ್ರೀತಿಸುವುದು ನಿಮ್ಮ ಖಾಸಗಿ ವಿಷಯ. ಹಾಗಂತ ಯಾರಾದರೂ ಯಾವುದೇ ಬಣ್ಣದ ಬಾವುಟ ಹಿಡಿದು ಬಂದು, ಜೈ ಶ್ರೀ ರಾಮ್ ಎಂದೋ ಇಂಕ್ವಿಲಾಬ್ ಜಿಂದಾಬಾದ್ ಎಂದೋ ಘೋಷಣೆ ಕೂಗುತ್ತಾ ಬಂದು, “ನೀನು ನಿನ್ನ ತಾಯಿಯನ್ನು ಪ್ರೀತಿಸುವುದೇ ನಿಜವಾದರೆ, ಹೇಗೆ ಪ್ರೀತಿಸುತ್ತೀಯ ತೋರಿಸು” ಅಂದರೆ, ಆಗ ನಿಮ್ಮ ಉತ್ತರ ಏನಿರುತ್ತದೆ?

ಈ ದೇಶ ನನ್ನದು. ನಾನು ಈ ದೇಶವನ್ನು ಪ್ರೀತಿಸುತ್ತೇನೆ. ನನಗೆ ಪ್ರೀತಿ ಪ್ರದರ್ಶನದ ವಸ್ತುವಲ್ಲ. ನಾನು ಅದನ್ನು ನನ್ನ ಎದೆಯಲ್ಲಿ ಹೊತ್ತು ತಿರುಗುತ್ತೇನೆ.

ಅನುವಾದ: ಚೇತನಾ ತೀರ್ಥಹಳ್ಳಿ

(ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ನಿನ್ನೆ ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ನಂತರ ಸಂವಾದದಲ್ಲಿ ಹುಡುಗಿಯೊಬ್ಬಳು ಕೇಳಿದ ಪ್ರಶ್ನೆಗೆ ಉತ್ತರ ಇದು.)

ಇದನ್ನು ಓದಿ: ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Kannaiakumar ninge ramayana bagge knowledge kadime badalagi estu ugra sangatanegalive yarara jothe sambanda itkondidiya ottareyagi deshadrohada kelasagalella gothu ninge

  2. I am new to this web site. Please give me some time to go through your other posts. I assure you that I am fully with you in full solidarity. With warm regards and best wishes, Narasimhan

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...