Homeಅಂತರಾಷ್ಟ್ರೀಯಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

ಬಿಸಿಸಿಐ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

- Advertisement -
- Advertisement -

ಅಕ್ರಮಣಕಾರಿ ಆಟದಿಂದ ಹೆಸರಾಗಿರುವ ಸ್ಟ್ರಾಂಗ್ ಕ್ರಿಕೆಟರ್, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಬಿಸಿಸಿಐನ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬಂಗಾಳದ ಕ್ರಿಕೆಟರ್ ಸೌರವ್ ಗಂಗೂಲಿ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಬಿಸಿಸಿಐನ ಪೂರ್ಣಾವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ನಲ್ಲಿ ಬಿಸಿಸಿಐನ ಅಧ್ಯಕ್ಷ ಸ್ಥಾನ ಅಲಂಕರಿಸಿದ ಎರಡನೇ ಭಾರತೀಯ ಕ್ರಿಕೆಟರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಸೌರವ್ ಗಂಗೂಲಿ ಅಕ್ರಮಣಕಾರಿ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ನೂತನ ಶೈಲಿಗೆ ನಾಂದಿ ಹಾಡಿದ್ದರು. ಬಿಸಿಸಿಐನ ಅಧ್ಯಕ್ಷ ಗಾದಿ ರೇಸ್ ನಲ್ಲಿ ಭಾರತದ ಮಾಜಿ ಕ್ರಿಕೆಟಿಗ, ಕರ್ನಾಟಕದ ಬ್ರಿಜೇಶ್ ಪಟೇಲ್ ಕೂಡ ಇದ್ದರು. ಆದರೆ ಅಂತಿಮವಾಗಿ ಸೌರವ್ ಗಂಗೂಲಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.

ಬಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಕ್ರಿಕೆಟ್ ದಾದಾ ಸೌರವ್ ಗಂಗೂಲಿ ಆಯ್ಕೆಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದರ ಜತೆಗೆ ನೂತನ ಖಜಾಂಚಿಯಾಗಿ ಅರುಣ್ ಧುಮಲ್ ನೇಮಕಗೊಂಡಿದ್ದಾರೆ.

ಬಿಸಿಸಿಐ ವಿವಿಧ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿತ್ತು. ಆದರೆ ಬಿಸಿಸಿಐ ಸ್ಥಾನಕ್ಕಾಗಿ ಸಾಕಷ್ಟು ಲಾಬಿ ನಡೆದ ಹಿನ್ನೆಲೆ ಚುನಾವಣೆ ನಡೆಯದೆಯೇ, ಅವಿರೋಧವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಬ್ರಿಜೇಶ್ ಕೂಡ ಪೈಪೋಟಿ ನಡೆಸಿದ್ದರು. ಈ ಮಧ್ಯೆ 2021ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಪ್ರಚಾರ  ನಡೆಸುವ ವಿಚಾರವಾಗಿ ಸೌರವ್ ಗಂಗೂಲಿ ಒಪ್ಪಿಗೆ ಸೂಚಿಸಿರಲಿಲ್ಲ. ಹೀಗಾಗಿ ಬೇರೆ ಅಭ್ಯರ್ಥಿ ಹುಡುಕಾಟ ನಡೆದಿತ್ತು. ಆದರೆ ಬೇರೆ ಭಾಗಗಳಿಂದ ಕೇಳಿ ಬಂದ ವಿರೋಧದಿಂದ ಹೈಡ್ರಾಮಾ ನಡೆದಿತ್ತು. ಇದೆಲ್ಲದರ ನಂತರ ಈಗ ಸೌರವ್ ಗಂಗೂಲಿ ಬಿಸಿಸಿಐನ ನೂರನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬಿಸಿಸಿಐ ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ವಿಚಾರಕ್ಕೆ ಸೌರವ್ ಗಂಗೂಲಿ ಸಂತಸ ವ್ಯಕ್ತಪಡಿಸಿದರು. ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಕ್ಕೆ ಖುಷಿಯಾಗಿದೆ. ಯಾವುದೋ ವಿಶೇಷ ಮತ್ತು ಉತ್ತಮ ಕೆಲಸ ಮಾಡಲು ಬಿಸಿಸಿಐ ಅವಕಾಶ ಕಲ್ಪಿಸಿದೆ. ನನಗೆ ಬಿಸಿಸಿಐ ಬೃಹತ್ ಜವಾಬ್ದಾರಿ ನೀಡಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನ ನಿಭಾಯಿಸುವುದು ಒಂದು ಸವಾಲಿನ ಕೆಲಸ ಎಂದು ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಬಿಸಿಸಿಐನ ಪೂರ್ಣಾವಧಿಗೆ ಅಧ್ಯಕ್ಷರಾಗಿ ಭಾರತ ತಂಡದ ಕ್ಯಾಪ್ಟನ್ ಮಹಾರಾಜಕುಮಾರ್ ವಿಜಿಯಾನಗ್ರಾಮ್ ಅಥವಾ ವಿಜ್ಜಿ 1954ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕೊಂಡಿದ್ದರು. ಅವರ ನಂತರ ಬಿಸಿಸಿಐ ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟಿಗರು ಆಯ್ಕೆಯಾಗಿರಲಿಲ್ಲ. ಭಾರತೀಯ ಲೆಜೆಂಡ್ ಕ್ರಿಕೆಟಿಗ ಸುನೀಲ್ ಗವಾಸ್ಕರ್ 2014ರಲ್ಲಿ ಮಧ್ಯಂತರ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಅವರನ್ನು ಬಿಸಿಸಿಐ ಪೂರ್ಣಾವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಿಲ್ಲ.

ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಸಂಸ್ಕೃತಿ ಹುಟ್ಟುಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತದ ಹೊರಗೆ ಟೆಸ್ಟ್ ಕ್ರಿಕೆಟ್ ಆಡಿದ ರೀತಿಯ ಬದಲಾವಣೆಗೆ ಕಾರಣರಾಗಿದ್ದರು. 2003ರಲ್ಲಿ ಐಸಿಸಿ ವರ್ಲ್ಡ್ ಕಪ್ ಫೈನಲ್ ತಲುಪಲು ಭಾರತದ ತಂಡಕ್ಕೆ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು. ಯುವರಾಜ್ ಸಿಂಗ್, ಜಹೀರ್ ಖಾನ್, ವೀರೇಂದ್ರ ಸೆಹ್ವಾಗ್, ಎಂ.ಎಸ್.ಧೋನಿ ಸೇರಿದಂತೆ ಅನೇಕ ಯುವ ಆಟಗಾರರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿದ್ದರು. ಗಂಗೂಲಿ 2015ರಿಂದ ಬಂಗಾಳದ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೌರವ್ ಗಂಗೂಲಿಯವರಿಗೆ ಗಣ್ಯರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ಇಲ್ಲಿಯವರೆಗೆ ಆಯ್ಕೆಯಾದ ಬಿಸಿಸಿಐ ಅಧ್ಯಕ್ಷರ ಪಟ್ಟಿ ಈ ಕೆಳಗಿನಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....