Homeಮುಖಪುಟವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ

- Advertisement -
- Advertisement -

| ನಾನುಗೌರಿ |

ಪ್ರಪಂಚಾದ್ಯಂತ ಗಾಂಧಿ ಪ್ರತಿಮೆಗಳನ್ನು ನಿರ್ನಾಮ ಮಾಡಲು ಇದು ಸಕಾಲ, ಹಾಗೆಯೇ ಭಾರತದ ಕರೆನ್ಸಿ ನೋಟುಗಳಿಂದಲೂ ಸಹ ಗಾಂಧಿ ಭಾವಚಿತ್ರ ತೆಗೆದುಬಿಡಿ’ ಎಂದು ವ್ಯಂಗ್ಯದಿಂದ ಅಣಕ ಮಾಡಿ ಮೇ 17ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯವರ ಹುದ್ದೆಗೆ ಸಂಚಕಾರ ಬಂದಿದೆ. ಈ ಕುರಿತು ತ್ವರಿತ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ನಿಧಿ ಚೌಧರಿಯವರು ಸರಣಿ ಟ್ವೀಟ್‍ಗಳನ್ನು ಮಾಡಿ ತನ್ನ ಗಾಂಧಿ ಪ್ರೇಮವನ್ನು ತೋರಿಸಬೇಕಾಗಿ ಬಂದಿದೆ. ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿ ಮಾಡಿರುವ ಹಳೆಯ ಟ್ವೀಟ್‍ಗಳನ್ನು ಮತ್ತೆ ಷೇರ್ ಮಾಡಿರುವ ಅವರು ‘ನಾನೆಂದೂ ಗಾಂಧೀಜಿಯವರನ್ನು ಅವಮಾನಿಸುವುದಿಲ್ಲ, ಅವರ ನನ್ನ ಸತ್ಯಾನ್ವೇಷಣೆ ಪುಸ್ತಕ ನನ್ನ ಎಲ್ಲಾ ಕಾಲದ ನೆಚ್ಚಿನ ಪುಸ್ತಕ’ ಎಂತಲೂ ಟ್ವೀಟ್ ಮಾಡಿದ್ದಾರೆ.

ಆದರೆ ಮೇ 17ರಂದು ನಿಧಿ ಚೌದರಿಯವರು ಟ್ವೀಟ್ ಮಾಡಿದ್ದನ್ನು ಸುದ್ದಿ ಮಾಡುವ ಭರದಲ್ಲಿ ಕೆಲ ಮಾಧ್ಯಮಗಳು ಅದರೊಳಗಿನ ವ್ಯಂಗ್ಯ, ಅಣಕವನ್ನು ಗುರುತಿಸಿರಲಿಲ್ಲ. ಇನ್ನು ಕೆಲವು ಮಾಧ್ಯಮಗಳಿಗೆ ಗೊತ್ತಿದ್ದರೂ ಸಹ ಆಕೆಯನ್ನು ದೇಶದ್ರೋಹಿ ರೀತಿಯಲ್ಲಿ ಚಿತ್ರಿಸಲಾಯಿತು. ಈಗ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸುವಷ್ಟರ ಮಟ್ಟಿಗೆ ಪ್ರಕರಣ ಬಂದು ನಿಂತಿದೆ.

ಇದೇ ಸಂದರ್ಭದಲ್ಲಿ ಚುನಾವಣಾ ಸಮಯದಲ್ಲಿ ಪ್ರಗ್ಯಾ ಸಿಂಗ್ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ್ದರು. ಅದನ್ನೇ ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಉತ್ತರ ಕನ್ನಡದ ಅನಂತ್ ಕುಮಾರ್ ಹೆಗ್ಡೆ ಪುನಾರಾವರ್ತಿಸಿದ್ದರು. ಆ ಮೂವರು ಈಗ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿರುವುದನ್ನು ನಾವು ನೆನಪಿಸಿಕೊಳ್ಳಬೇಕಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪತ್ರಕರ್ತ ಗಿರೀಶ್ ತಾಳಿಕಟ್ಟೆ ಅವರು ಹೀಗೆಂದರು. ‘ಇಂದಿನ ಕಾಲ ಎತ್ತ ಸಾಗುತ್ತಿದೆ ಎಂಬುದಕ್ಕೆ ಈ ಘಟನೆ ನಿದರ್ಶನ. ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ’.

ಈ ಕುರಿತು ಮೊದಲು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿತ್ತು. ನಂತರ ಅವರ ಸ್ಪಷ್ಟೀಕರಣವನ್ನು ಸೇರಿಸಿ ವರದಿ ಪ್ರಕಟಿಸಿದೆ. ಈ ಕುರಿತು ಕನ್ನಡದ ಪ್ರಮುಖ ಬರಹಗಾರರಾದ ಕೆ.ಪಿ ನಟರಾಜ್‍ರವರು ಮೊದಲು ಆ ಐಎಎಸ್ ಅಧಿಕಾರಿಯ ವಿರುದ್ಧ ಷೇರ್ ಮಾಡಿದ್ದ ಲೇಖನವನ್ನು ಅಳಿಸಿ ಪೂರ್ತಿ ಗಮನಿಸದೇ ಷೇರ್ ಮಾಡಿದ್ದಕ್ಕೆ ಕ್ಷಮೆ ಕೇಳುವ ಮೂಲಕ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...