Homeರಾಜಕೀಯಸಿದ್ದುಗೆ ಅಮಿತ್ ಶಾ ಮಾಡಿದ ಆ ಫೋನ್ ಕಾಲ್

ಸಿದ್ದುಗೆ ಅಮಿತ್ ಶಾ ಮಾಡಿದ ಆ ಫೋನ್ ಕಾಲ್

- Advertisement -
- Advertisement -

ಇದು ಕರ್ನಾಟಕ ಪೊಲಿಟಿಕಾಯಣದ ಮೋಸ್ಟ್ ಶಾಕಿಂಗ್ ನ್ಯೂಸ್. ಮಾಜಿ ಸಿಎಂ ಸಿದ್ರಾಮಯ್ಯರಿಗೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಫೋನು ಮಾಡಿ ಮಾತಾಡಿದ್ದಾರಂತೆ!! `ಹಲೋ ಸಿದ್ರಾಮಯ್ಯಾಜಿ, ಸಿಎಂ ಆಗಿದ್ದೋರು ನೀವು. ನಿಮ್ಮಂತ ನಾಯಕರು ಖಾಲಿ ಕೂರಬಾರದು. ನೀವು ನಮ್ಮ ಪಕ್ಷಕ್ಕೆ ಬಂದುಬಿಡಿ. ನಿಮಗೆ ಯಾವ ಹುದ್ದೆ ಅನ್ನೋದನ್ನು ಆಮೇಲೆ ಮಾತಾಡೋಣ. ಹೇಗೂ ನಮಗೆ ಯಡ್ಯೂರಪ್ಪನವರನ್ನೇ ಸಿಎಂ ಮಾಡಬೇಕೆನ್ನುವ ಹಠವೇನೂ ಇಲ್ಲ. ಮುಂದಿನದನ್ನು ನೋಡೋಣ’ ಎಂಬರ್ಥದಲ್ಲಿ ಬಹಳ ಆತ್ಮೀಯವಾಗಿ ಅಮಿತ್ ಶಾ ಸಿದ್ದು ಜೊತೆ ಮಾತಾಡಿದ್ದಾರಂತೆ.ಆದರೆ ಸಿದ್ದು ಅಮಿತ್ ಶಾರ ಈ ಆಫರನ್ನು ಅಷ್ಟೇ ನಯವಾಗಿ ತಿರಸ್ಕರಿಸಿದ್ದಾರೆ ಅನ್ನೋದು ವರ್ತಮಾನ. ಸರ್ಕಾರ ರಚನೆಯ ಅಂಚಿಗೆ ಬಂದು ವಂಚಿತವಾಗಿರುವ ಬಿಜೆಪಿಗೆ ಅಧಿಕಾರದ ಹಪಾಹಪಿ ಎಷ್ಟಿದೆ ಅನ್ನೋದು ಇದರಿಂದ ಅರ್ಥವಾಗುತ್ತೆ.ಅಧಿಕಾರಕ್ಕಾಗಿ ಯಡ್ಯೂರಪ್ಪರನ್ನೂ ಬಲಿಪಶು ಮಾಡಲು ಬಿಜೆಪಿ ಸಜ್ಜಾಗಿದೆ ಅನ್ನೋದು ಇದರಿಂದ ಮತ್ತೊಮ್ಮೆ ಸಾಬೀತಾಗಿದೆ. ಸ್ವತಃ ಸಿದ್ರಾಮಯ್ಯಗೆ ಆಪರೇಷನ್ ಮಾಡಲು ಮುಂದಾಗಿದ್ದಾರೆಂದರೆ ಉಳಿದ ಎಂಎಲ್‍ಎಗಳ ಕತೆ ಎಂತದ್ದಿರಬೇಡ. ಅಹಿಂದ ಪಾಲಿಸಿ ಮತ್ತು ಸೆಕ್ಯುಲರ್ ಐಡಿಯಾಲಜಿಗಳಿಗೆ ಅಂಟಿಕೊಂಡಿರುವ ಸಿದ್ದುಗೆ ಬಿಜೆಪಿಯ ಘಾತುಕ ಹಕೀಕತ್ತು ಎಂತದ್ದೆಂಬುದು ಚೆನ್ನಾಗಿ ಅರ್ಥವಾಗಿರೋದ್ರಿಂದಲೇ ಬೇರೆಯವರಂತೆ ಅಧಿಕಾರದ ಆಸೆಗೆ ಬಲಿಯಾಗದೆ ಒಂದು ಸಮತೂಕದ ನಿರ್ಧಾರ ಕೈಗೊಂಡಿದ್ದಾರೆ.ಬೇರೆಲ್ಲ ರಾಜಕಾರಣಿಗಳ ನಡುವೆ ಸಿದ್ದು ಇಷ್ಟವಾಗೋದು ಇದೇ ಕಾರಣಕ್ಕೆ. ಅಂದಹಾಗೆ, ಈ ಮಾತುಕತೆ ನಡೆದಿರೋದು ಜಸ್ಟ್ ಹದಿನೈದು ದಿನಗಳ ಹಿಂದಷ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...