Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...