Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...