Homeಸಿನಿಮಾಕ್ರೀಡೆಹಿಮಾಳ ಸಾಧನೆ ನುಂಗಿಹಾಕಿದ ಭಾರತದ ಜಾತಿ ಮನಸ್ಸು

ಹಿಮಾಳ ಸಾಧನೆ ನುಂಗಿಹಾಕಿದ ಭಾರತದ ಜಾತಿ ಮನಸ್ಸು

- Advertisement -
- Advertisement -

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ. ಅಸ್ಸಾಂನ ನಾಗಾಂವ ಜಿಲ್ಲೆಯ ಧಿಂಗ್ ಹಳ್ಳಿಯ ಬಡರೈತ ಕುಟುಂಬದ ಈ ಕೂಸಿಗೆ ಕ್ರೀಡಾ ಹಿನ್ನೆಲೆ ಇಲ್ಲ. ಹುಟ್ಟಿದೂರಿನಲ್ಲಿ ಕ್ರೀಡೆಯ ಮೂಲ ಸೌಕರ್ಯದ ಯಾವ ಸವಲತ್ತೂ ಇರಲಿಲ್ಲ. ಇಂಥಾ ಹುಡುಗಿ ಇಡೀ ಜಗತ್ತೇ ನಿಬ್ಬೆರಗಾಗುವಂಥ ಸಾಧನೆ ಮಾಡಿದ್ದಾಳೆ. ಭಾರತದ ಕ್ರೀಡಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಚಿನ್ನ ಪಡೆದವಳು ಹಿಮಾ ದಾಸ್!

ದೇಶಕ್ಕೆ ವಿಶ್ವ ಚಾಂಪಿಯನ್ ಪಟ್ಟ ತಂದುಕೊಟ್ಟ ಹಿಮಾಳ ಬಗ್ಗೆ ದೇಶಾದ್ಯಂತ ಪ್ರಶಂಸೆಯ ಮಹಾಪೂರವೇ ಹರಿದು ಬಂತು. ಆಡಳಿತ ಪಕ್ಷ ವಿರೋಧ ಪಕ್ಷಗಳೆಲ್ಲವೂ ಹಿಮಾಳಿಗೆ ಅಭಿನಂದನೆ ಹೇಳಲು ಪೈಪೋಟಿಗೆ ಬಿದ್ದವು. ಕ್ರೀಡಾಲೋಕದ ದಿಗ್ಗಜರು, ಸಿನಿಮಾ ತಾರೆಯರು, ಸಾಹಿತ್ಯವಂತರು – ಹೀಗೆ ಎಲ್ಲರೂ ಅಭಿನಂದನೆಯ ಹೊಳೆಯನ್ನೇ ಹರಿಸಿದರು. ಸಾಮಾಜಿಕ ಜಾಲತಾಣಗಳಲ್ಲಂತೂ ಅಭಿನಂದನೆಯ ಪ್ರವಾಹವೇ ಹರಿಯಿತು. ಪ್ರಪ್ರಥಮ ಬಾರಿಗೆ ಭಾರತದ ಹುಡುಗಿ ವಿಶ್ವ ಚಾಂಪಿಯನ್ ಆಗಿ ಚಿನ್ನದ ಪದಕ ಗಳಿಸಿದ್ದರಿಂದ ಈ ಅಭಿಮಾನದ ಹೊಳೆ ಸಹಜವೇ ಆಗಿತ್ತು.

ಇಂಥಾ ಸಂಭ್ರಮದ ಗಳಿಗೆಯಲ್ಲೇ ಜಗತ್ತಿನೆದುರು ಭಾರತ ತಲೆತಗ್ಗಿಸಬೇಕಾದ ವಿದ್ಯಮಾನವೂ ಸಂಭವಿಸಿದೆ.
ಕ್ರೀಡಾ ಆಗಸದಲ್ಲಿ ದಿಡೀರ್ ಮಿಂಚಿನಂತೆ ಬಂದೆರಗಿದ ಹಿಮಾದಾಸ್ ಯಾರು, ಏನು ಎಂಬ ಬಗ್ಗೆ ಹೊರ ಜಗತ್ತಿಗಿರಲಿ, ಭಾರತೀಯರಿಗೇ ಗೊತ್ತಿರಲಿಲ್ಲ. ಹೀಗಾಗಿ ಕುತೂಹಲಭರಿತ ಭಾರತೀಯರು ಈ ಹೊಸ ತಾರೆಯ ಬಗ್ಗೆ ತಿಳಿದುಕೊಳ್ಳಲು ಗೂಗಲ್ ಸರ್ಚ್ ಇಂಜಿನ್‍ನ ಮೊರೆಹೋದರು. ಹಿಮಾದಾಸ್ ಯಾರು? ಯಾವ ಊರು? ಹಿಂದಿನ ಕ್ರೀಡಾ ಸಾಧನೆ ಏನು? ಆಕೆಯ ಶಿಕ್ಷಣ ಎಲ್ಲಿ ನಡೆದಿದೆ? ತರಬೇತು ನೀಡಿದವರು ಯಾರು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿರಬಹುದೆಂದು ನೀವು ಸಹಜವಾಗಿ ಊಹಿಸುತ್ತೀರಿ. ಆದರೆ ಗೂಗಲ್‍ನಲ್ಲಿ ಹೆಚ್ಚಿನ ಮಂದಿ ಹುಡುಕಿದ್ದು ಆಕೆಯ ಜಾತಿಯನ್ನು! ಭಾರತೀಯರಿಗೆ ಯಾಕೆ ಅಷ್ಟೊಂದು ಕುತೂಹಲ ಗೊತ್ತೆ? ಆಕೆಯ ಜಾತಿ ಯಾವುದೆಂದು ಪತ್ತೆಯಾದರೆ ಅದಕ್ಕೆ ತಕ್ಕಂತೆ ಅವಳಿಗೆ ಬಿರುದು ಸನ್ಮಾನಗಳನ್ನು ಕೊಡಬಹುದು. ಆಕೆಯನ್ನು ತಮ್ಮ ಜಾತಿಯ ‘ಹಿರಿಮೆ’ಗೆ ಗರಿಯನ್ನಾಗಿಯೂ, ಐಕಾನ್ ಆಗಿಯೂ ಬಳಸಿಕೊಳ್ಳಬಹುದು. ಇದು ವಿಚಿತ್ರ ಅನಿಸಬಹುದು. ಆದರೆ ಇದುವೇ ಭಾರತದ ಅತ್ಯಂತ ಸಹಜ ಸ್ಥಿತಿ. ಭಾರತೀಯರ ಇಂಥಾ ಜಾತಿ ಬುದ್ದಿಯ ಬಗ್ಗೆ ಜಗತ್ತಿನ ಸಾವಿರಾರು ಮಂದಿ ಛೀಮಾರಿ ಹಾಕಿದ್ದಾರೆ.
ಗೂಗಲ್‍ನಲ್ಲಿ ಹಿಮಾ ದಾಸ್ ಎಂದು ಸರ್ಚ್ ಕೊಟ್ಟರೆ ನಮಗೆ ಮೊದಲು ಅದರ ನ್ಯೂಸ್ ಫೀಡ್‍ನ ಆಯ್ಕೆಗಳು ಕಾಣಸಿಗುತ್ತವೆ. ಇದೇ ವಿಷಯದ ವಿಭಿನ್ನ ಆಯಾಮಗಳ ಬಗ್ಗೆ ಅತಿ ಹೆಚ್ಚು ಹುಡುಕಾಟ ನಡೆಸಿರುವ ವಿಷಯ ಪಟ್ಟಿಯನ್ನು ಅನುಕ್ರಮವಾಗಿ ಗೂಗಲ್ ನಿಮಗೆ ಒದಗಿಸುತ್ತದೆ. ಹೀಗೆ ಭಾರತೀಯರ ಜಾತಿವಾದಿ ಮನಸ್ಥಿತಿ ಸರ್ಚ್ ಲಿಸ್ಟ್‍ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಹಿಮಾ ದಾಸ್‍ಳ ಪ್ರತಿಭೆ ವಿಶ್ವಮಟ್ಟದಲ್ಲಿ ಸಾಬೀತಾಗಿದೆಯಲ್ಲಾ? ಆಕೆಯ ಪ್ರತಿಭೆಯನ್ನು ಗುರುತಿಸಿದರಷ್ಟೇ ಸಾಲದೆ? ಇಲ್ಲ. ಆಕೆಯ ಜಾತಿ ಯಾವುದೆಂದು ತಿಳಿದುಕೊಂಡ ನಂತರವೇ ಆಕೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕೋ ಬೇಡವೋ ಎಂದು ನಿರ್ಧರಿಸಲು ಬಹುಶಃ ಈ ಮಂದಿ ನಿರ್ಣಯಿಸಿದ್ದಿರಬಹುದು. ಇದು ಭಾರತೀಯ ಮನಸ್ಥಿತಿ.

ಭಾರತದಲ್ಲಿ ಜಾತಿ ವ್ಯವಸ್ಥೆ ಮುಂದುವರೆದಿರುವುದಕ್ಕೆ ಶಿಕ್ಷಣದ ಕೊರತೆ ಪ್ರಮುಖ ಕಾರಣ ಎಂದೂ, ಎಲ್ಲೋ ಮೂಲೆಯ ಕುಗ್ರಾಮಗಳಲ್ಲಿ ಮಾತ್ರ ಜಾತಿ ವ್ಯವಸ್ಥೆ ಉಳಿದುಕೊಂಡಿದೆ, ನಗರಪ್ರದೇಶಗಳಲ್ಲಿ ಜಾತಿ ವ್ಯವಸ್ಥೆ ನಾಮಾವಶೇಷವಾಗಿದೆಯೆಂತಲೂ ಎಂದು ಅನೇಕ ಆಸ್ಥಾನ ಪಂಡಿತರು ಸದಾ ತೌಡು ಕುಟ್ಟುತ್ತಾರೆ. ಹಾಗಾದರೆ ಜಾಲತಾಣದಲ್ಲಿ ಹಿಮಾಳ ಜಾತಿ ಕಂಡುಕೊಳ್ಳಲು ಪ್ರಯಾಸಪಟ್ಟವರು ಅವಿದ್ಯಾವಂತರೆ? ಅಥವಾ ಕುಗ್ರಾಮದ ಗಮಾರರೆ? ಹೀಗೆ ಕ್ಯಾಸ್ಟ್ ಸರ್ಚ್ ಮಾಡಿದ ಬಹುತೇಕರು ತಮ್ಮ ಕೈಗಳಲ್ಲಿ ಸ್ಮಾರ್ಟ್ ಫೋನ್ ಹಿಡಿದಿರುವ ಸುಶಿಕ್ಷಿತ ನಗರವಾಸಿಗಳೇ.

ವಿಪರ್ಯಾಸವೆಂದರೆ, ಸಾರ್ವಜನಿಕ ಚರ್ಚೆಗಳಲ್ಲಿ ‘ಜಾತಿ ಎಲ್ಲಿದೆ ಹೇಳಿ?’ ಎಂಬ ವಿತಂಡ ವಾದ ಹೂಡುವವರು ಇದೇ ಮಂದಿ! ನಮ್ಮ ಸಮಾಜದಲ್ಲಿ ಇಂಥಾ ಆಷಾಡಭೂತಿತನ ರಕ್ತಗತವಾಗಿಬಿಟ್ಟಂತಿದೆ.

ಪಿಟಿ ಉಷಾ ವಿಚಾರದಲ್ಲೂ ಇದೇ ಆಶ್ಚರ್ಯ ನಿಮಗೆ ಕಾದಿರುತ್ತದೆ. ಉಷಾ ಅಥ್ಲೀಟ್‍ನಿಂದ ನಿವೃತ್ತಿಯಾಗಿ ದಶಕ ಕಳೆದಿದ್ದರೂ ಇಂದಿಗೂ ಆಕೆಯ ಜಾತಿ ತಿಳಿದುಕೊಳ್ಳಲು ಹೆಚ್ಚಿನ ಜನ ಆಸಕ್ತಿ ತೋರುತ್ತಿದ್ದಾರೆ. 2016ರ ರಿಯೋ ಒಲಂಪಿಕ್ಸ್‍ನ ಬ್ಯಾಡ್ಮಿಂಟನ್‍ನಲ್ಲಿ ಪಿವಿ ಸಿಂಧು ಬೆಳ್ಳಿ ಪದಕ ಗಳಿಸಿದಾಗಲೂ ನಮ್ಮ ಹೆಮ್ಮೆಯ ಭಾರತೀಯರು ತಮ್ಮ ಚಿಲ್ಲರೆ ಜಾತಿ ಬುದ್ದಿ ತೋರಿಸಿದ್ದರು.

ಈ ಮೇಲಿನ ಉದಾಹರಣೆಗಳೆಲ್ಲ ಜಾತಿಯ ಬೇರುಗಳು ಎಷ್ಟು ಆಳದಲ್ಲಿವೆ ಎಂಬುದನ್ನು ನಿರ್ವಿವಾದಿತವಾಗಿ ಎತ್ತಿ ತೋರಿಸುತ್ತಿವೆ. ಮೋದಿ ಭಕ್ತಪಡೆ ಭಾರತ ‘ವಿಶ್ವ ಗುರು’ ಎಂದು ಬೊಬ್ಬಿಡುತ್ತಿದ್ದಾರೆ. ಆದರೆ ಭಾರತ ಸಾಗಬೇಕಾದ ದೂರ ಇನ್ನೂ ಬಹಳವಿದೆ ಎಂಬುದನ್ನು ಹಿಮಾ ದಾಸ್ ಎಪಿಸೋಡ್ ಅನುಮಾನಕ್ಕೆಡೆಯಿಲ್ಲದಂತೆ ತೋರಿಸಿಕೊಟ್ಟಿದೆ.

ಸಾಮಾನ್ಯ ಜನರ ಮಾತು ಒತ್ತಟ್ಟಿಗಿರಲಿ, ಅಥ್ಲೀಟ್ ಫೆಡರೇಷನ್ ಇಂಡಿಯ ಸಂಸ್ಥೆ ನಡೆದುಕೊಂಡ ರೀತಿ ನೋಡಿ. ಅಭಿನಂದನೆಗಳನ್ನು ಹೇಳಲಿಕ್ಕಾಗಿ ಟ್ವೀಟ್ ಮಾಡಿದ ಎಎಫ್‍ಐ “ಇಂಗ್ಲಿಷ್ ಮಾತಾಡಲು ಸರಿಯಾಗಿ ಬರದಿದ್ದರೂ ಕೂಡ ಹಿಮಾ ಉತ್ತಮ ಸಾಧನೆ ಮಾಡಿದ್ದಾಳೆ… ಹಿಮಾ ದಾಸ್‍ಗೆ ಅಭಿನಂದನೆಗಳು…”. ಎಎಫ್‍ಐನ ಧೋರಣೆಗೆ ಟ್ವಿಟ್ಟಿಗರು ‘ಹಿಮಾ ದಾಸ್ ಹೋಗಿದ್ದುದು ಓಟದ ಸ್ಪರ್ದೆಗೋ ? ಅಥವಾ ಇಂಗ್ಲಿಷ್ ಭಾಷಾ ಪಾಂಡಿತ್ಯ ಸ್ಪರ್ಧೆಗೋ?’ ಎಂದು ತಿರುಗೇಟು ನೀಡಿದ್ದಾರೆ.

ಆದರೆ ಫಿನ್‍ಲೆಂಡ್‍ನ ವಿದೇಶಿ ನೆಲದಲ್ಲಿ ನೆಲೆಸಿರುವ ಕೆಲವು ಭಾರತೀಯರು ಈ ಚಿನ್ನದ ಹುಡುಗಿಗೆ ಏನಾದರೂ ಉಡುಗೊರೆ ಕೊಡಬೇಕೆಂದು ತಮ್ಮ ವಾಟ್ಸಪ್ ಗ್ರೂಪಿನಲ್ಲಿ ಚರ್ಚಿಸಿದರು. ಒಂದಷ್ಟು ಹಣವನ್ನು ಬಹುಮಾನವಾಗಿ ಕೊಡಲು ತೀರ್ಮಾನಿಸಿ ಅಂದೇ ಒಂದು ಲಕ್ಷ ರೂನಷ್ಟು ಹಣ ಸಂಗ್ರಹಿಸಿದರು. ಹಿಮಾ ದಾಸ್‍ಳನ್ನು ಭೇಟಿಯಾಗಿ ಅಭಿನಂದಿಸಿ, ಆತಿಥ್ಯ ನೀಡಿ ಸತ್ಕರಿಸಿದರು. ಆದರೆ ಹಣವನ್ನು ಸ್ಥಳದಲ್ಲೇ ಹಸ್ತಾಂತರಿಸಲಿಲ್ಲ. ಯಾಕೆಂದರೆ ಆ ಹಣ ಯಾರ ಕೈಗೆ ಸೇರುತ್ತದೋ ಎಂಬುದು ಅವರಿಗೆ ಖಾತ್ರಿಯಿರಲಿಲ್ಲ. ಹಾಗಾಗಿ ಆ ಹಣವನ್ನು ನೇರವಾಗಿ ಹಿಮಾಳ ಖಾತೆಗೆ ವರ್ಗಾಯಿಸಲು ತೀರ್ಮಾನಿಸಿದ್ದಾರೆ. ಅರ್ಹ ವ್ಯಕ್ತಿಗೆ ಸೇರಬೇಕಾದ ಹಣ ಮತ್ಯಾರೋ ಮಧ್ಯವರ್ತಿಗಳ ಪಾಲಾಗುತ್ತದೆಂಬುದು ಅವರ ಈ ತೀರ್ಮಾನಕ್ಕೆ ಕಾರಣ.

ಇನ್ನು ಹಿಮಾಳ ವೈಯುಕ್ತಿಕ ಹಿನ್ನೆಲೆಯನ್ನು ಗಮನಿಸಿದರೆ ಅವಳ ಸಾಧನೆಯ ಮಹತ್ವ ನಮ್ಮ ಅರಿವಿಗೆ ಬರುತ್ತದೆ. ಶಾಲಾ ದಿನಗಳಲ್ಲಿ ಹುಡುಗರ ತಂಡದಲ್ಲಿ ಪುಟ್ಬಾಲ್ ಆಡುತ್ತಿದ್ದ ಹಿಮಾ ಫಿನ್ಲೆಂಡ್‍ನಲ್ಲಿ ನಡೆದ 20 ವರ್ಷದೊಳಗಿನ ವಿಶ್ವ ಅಥ್ಲೇಟಿಕ್ ಜೂನಿಯರ್ಸ್ ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಕೇವಲ 51.46 ಸೆಕೆಂಡುಗಳಲ್ಲಿ ಚಿನ್ನದ ಜಯ ಸಾಧಿಸಿ ದಾಖಲೆ ಬರೆದ ಭಾರತದ ಮೊದಲ ಅಥ್ಲೇಟ್.

16 ಜನರ ಅವಿಭಕ್ತ ಕುಟುಂಬದಲ್ಲಿ ಜೋನಿಲಾ ಮತ್ತು ರಂಜಿತ ದಾಸ್ ರೈತ ದಂಪತಿಗಳ ಕೂಸು ಹಿಮ. ಇಡೀ ಕುಟುಂಬ ಇರುವ ಭತ್ತದ ಗದ್ದೆಯಲ್ಲಿ ದುಡಿದರಷ್ಟೇ ಆದಾಯ. ಆದರೆ ಇದಾವುದು ಹಿಮಾ ಸಾಧನೆಗೆ ಅಡ್ಡಿಯಾಗಲೇ ಇಲ್ಲ. ಫುಟ್ಬಾಲ್ ಕನಸು ಕಂಡು, ವಾಸ್ತವದಲ್ಲಿ ಅಥ್ಳೇಟಿಕ್ಸ್‍ನಲ್ಲಿ ಹೆಜ್ಜೆಯಿರಿಸಿದ ಹಿಮಾಗೆ ಗುವಾಹಟಿಯ ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ನಿಪೋ ದಾಸ್ ಬೆಂಬಲವಾಗಿ ನಿಂತರು. ರಾಷ್ಟ್ರೀಯ ತಂಡದ ಕೋಚ್ ಬಸಂತ ಸಿಂಗ್ ಹಿಮಾಳ ಹಾದಿಯನ್ನು ಮತ್ತಷ್ಟು ಸ್ಪಷ್ಟ ಮತ್ತು ನಿಚ್ಚಳವಾಗಿಸಿದರು. ಪಿ.ಟಿ.ಉಷಾ ಕೂಡ ಹಿಮಾಳ ಜೊತೆಯಲ್ಲೇ ಇದ್ದು ಆಕೆಯನ್ನು ಹುರಿದುಂಬಿಸಿದ್ದರು. ಈ ಎಲ್ಲರ ಶ್ರಮವನ್ನು ನಾವು ಗೌರವದಿಂದ ನೆನೆಯಬೇಕು.

ಹಿಮಾ ದಾಸ್ ಒಂದು ಅಂಶವನ್ನಂತೂ ಅನುಮಾನಕ್ಕೆಡೆಯಿಲ್ಲದಂತೆ ಸಾಬೀತುಪಡಿಸಿದ್ದಾಳೆ. ಭಾರತಕ್ಕೆ ಚಿನ್ನದ ಪದಕಗಳನ್ನು ಗಳಿಸಬಲ್ಲ ಪ್ರತಿಭೆಗಳು ಮಹಾನಗರಗಳ ಕಾನ್ವೆಂಟುಗಳಲ್ಲಿ, ಭವ್ಯವಾದ ಮಹಲುಗಳಲ್ಲಿ ಇರುವುದಿಲ್ಲ; ನಮ್ಮ ಹಳ್ಳಿಗಾಡುಗಳಲ್ಲಿ, ಭತ್ತದ ಗದ್ದೆಗಳಲ್ಲಿ, ಆದಿವಾಸಿಗಳ ಹಾಡಿಗಳಲ್ಲಿಯೂ ಇದ್ದಾರೆ. ಆದರೆ ಅಲ್ಲಿನ ಪ್ರತಿಭೆಗಳನ್ನು ಹುಡುಕುವ ಮನಸ್ಸಿದೆಯೆ?

  • – ರೂಪಾ ಕೆ. ಮತ್ತಿಕೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...