Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಕಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಬವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ ೩೧ ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ೧೨ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ ೯-೩ ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ ೩ ಸ್ಥಾನಕ್ಕೆ
೩೦ ಜನರ ಲಾಬಿ
ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ ೧೨ ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ ೯ ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು ೩೦ ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ
ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿಟ್ಟಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿAದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ
ಸಿಗದ ಶಾಂತಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ ೧೭ ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊAದು ಕಥೆ ಎಂಬಂತಾಗಿದೆ.

೧೫ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ ೧೨ ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.
ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ ೯ ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ ೧೫. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ ೧೫ ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.೧೭ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...