Homeಮುಖಪುಟ'ಎಕ್ಸಿಟ್ ಪೋಲ್‌'ನಿಂದ ಷೇರು ಮಾರುಕಟ್ಟೆಯಲ್ಲಿ ₹30 ಲಕ್ಷ ಕೋಟಿ ನಷ್ಟ: 'ದೇಶದ ಬೃಹತ್ ಹಗರಣ' ಎಂದ...

‘ಎಕ್ಸಿಟ್ ಪೋಲ್‌’ನಿಂದ ಷೇರು ಮಾರುಕಟ್ಟೆಯಲ್ಲಿ ₹30 ಲಕ್ಷ ಕೋಟಿ ನಷ್ಟ: ‘ದೇಶದ ಬೃಹತ್ ಹಗರಣ’ ಎಂದ ರಾಹುಲ್ ಗಾಂಧಿ

- Advertisement -
- Advertisement -

“ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ ‘ಎಕ್ಸಿಟ್‌ ಪೋಲ್‌’ನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ. ಇದರ ಬಗ್ಗೆ ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿರುವ ಎಐಸಿಸಿಯ ಮುಖ್ಯ ಕಚೇರಿಯಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 4 ರಂದು ಷೇರು ಮಾರುಕಟ್ಟೆ ಏರಿಕೆಯಾಗಲಿದೆ ಮತ್ತು ನೀವೆಲ್ಲರೂ ಹೂಡಿಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಜೊತೆಗೆ ಹಣಕಾಸು ಸಚಿವರೂ ಇದೇ ರೀತಿ ಹೇಳಿದ್ದರು. ಜೂನ್ 4ರ ಮೊದಲು ಷೇರುಗಳನ್ನು ಖರೀದಿಸಿ ಎಂದು ಖುದ್ದು ಪ್ರಧಾನಿ ಮೋದಿ ಕೂಡ ಹೇಳಿದ್ದರು. ಅಲ್ಲದೇ, ಜೂನ್ 4ರಂದು ಮಾರುಕಟ್ಟೆಯ ಹಿಂದಿನ ದಾಖಲೆಗಳನ್ನು ಮುರಿಯಲಿದೆ ಎಂದಿದ್ದರು. ಬಿಜೆಪಿಗೆ ಬಹುಮತ ಬರುವುದಿಲ್ಲ ಎಂದು ಪಕ್ಷದ ಆಂತರಿಕ ಸರ್ವೇಯಿಂದ ಖಚಿತ ಮಾಹಿತಿ ಇದ್ದರೂ ಕೂಡ ಈ ರೀತಿಯ ಹೇಳಿಕೆಗಳನ್ನು ನೀಡಿ, ದೇಶದ ಜನರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾಡಿದ್ದಾರೆ. ಎಕ್ಸಿಟ್ ಪೋಲ್‌ನಿಂದ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್ ಹಗರಣ” ಎಂದು ಹೇಳಿದ್ದಾರೆ.

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ 5 ಕೋಟಿ ಕುಟುಂಬಗಳಿಗೆ ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ಸಲಹೆ ನೀಡಿದ್ದು ಏಕೆ? ಜನರಿಗೆ ಹೂಡಿಕೆ ಸಲಹೆ ನೀಡುವುದು ಅವರ ಕೆಲಸವೇ? ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದೆ” ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

“ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಎಂದು ಸಲಹೆ ನೀಡುವುದಕ್ಕೆ ಎರಡೂ ಸಂದರ್ಶನಗಳನ್ನು ಒಂದೇ ಮಾಧ್ಯಮಕ್ಕೆ ನೀಡಲಾಗಿದೆ. ಈ ಮಾಧ್ಯಮ ಸಂಸ್ಥೆಯ ಮಾತೃ ಸಂಸ್ಥೆಯು ಷೇರು ಮಾರುಕಟ್ಟೆಯನ್ನು ತಿರುಚಿದ ಆರೋಪಕ್ಕಾಗಿ ಸೆಬಿಯಿಂದ ತನಿಖೆ ಎದುರಿಸುತ್ತಿದೆ. ಇದೇ ಸಂಸ್ಥೆಗೆ ಏಕೆ ಸಂದರ್ಶನ ನೀಡಿದ್ದಾರೆ? ಬಿಜೆಪಿ ಮತ್ತು ನಕಲಿ ಎಕ್ಸಿಟ್ ಪೋಲ್‌ಗಳನ್ನು ಪ್ರಕಟಿಸಿದ ಸಂಸ್ಥೆಗಳಿಗೂ ಹಾಗೂ ಎಕ್ಸಿಟ್‌ ಪೋಲ್‌ಗೂ ಮುಂಚೆ ಷೇರು ಖರೀದಿಸಿದ ಸಂಶಯಾಸ್ಪದ ವಿದೇಶಿ ಹೂಡಿಕೆದಾರರಿಗೂ ನಡುವಿನ ಸಂಬಂಧವೇನು? ಇದಕ್ಕೆಲ್ಲ ಉತ್ತರ ಸಿಗಬೇಕಿದೆ ಎಂದು ರಾಹುಲ್ ಹೇಳಿದ್ದಾರೆ.

“ಇದು ಷೇರು ಮಾರುಕಟ್ಟೆಯ ಅತಿದೊಡ್ಡ ಹಗರಣ. ಈ ಕುರಿತು ಜಂಟಿ ಸಂಸದೀಯ ಸಮಿತಿಯ ಮೂಲಕ ತನಿಖೆ ನಡೆಯಬೇಕು ಎಂದು ನಾವು ಒತ್ತಾಯಿಸುತ್ತೇವೆ. 30 ಲಕ್ಷ ಕೋಟಿ ರೂ. ನಷ್ಟವಾಗಿರುವುದರಿಂದ 5 ಕೋಟಿ ಕುಟುಂಬಗಳಿಗೆ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ದೇಶದ ಜನರಿಗಾದ ನಷ್ಟಕ್ಕೆ ಯಾರು ಹೊಣೆ ಎಂಬುವುದಕ್ಕೆ ಉತ್ತರ ಸಿಗಬೇಕಿದೆ” ಎಂದಿದ್ದಾರೆ.

ಇದನ್ನೂ ಓದಿ : ಹೊಸದಾಗಿ ಚುನಾಯಿತರಾದ 251 ಸಂಸದರ ಮೇಲಿದೆ ಕ್ರಿಮಿನಲ್ ಮೊಕದ್ದಮೆ: ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...