Homeಮುಖಪುಟಕೇಂದ್ರದಿಂದ ₹1,78,173 ಕೋಟಿ ತೆರಿಗೆ ಹಂಚಿಕೆ; ಬಿಜೆಪಿ ಆಡಳಿತದ ರಾಜ್ಯಗಳಿಗೆ ಸಿಂಹಪಾಲು

ಕೇಂದ್ರದಿಂದ ₹1,78,173 ಕೋಟಿ ತೆರಿಗೆ ಹಂಚಿಕೆ; ಬಿಜೆಪಿ ಆಡಳಿತದ ರಾಜ್ಯಗಳಿಗೆ ಸಿಂಹಪಾಲು

- Advertisement -
- Advertisement -

ಕೇಂದ್ರ ಸರ್ಕಾರವು ₹1,78,173 ಕೋಟಿ ತೆರಿಗೆ ಪಾಲನ್ನು ಹಂಚಿಕೆ ಮಾಡಿದ್ದು, ಬಿಜೆಪಿ ಆಡಳಿತದ ರಾಜ್ಯಗಳಿಗೆ ಮತ್ತು ಮಿತ್ರ ಪಕ್ಷಗಳ ಸರ್ಕಾರಕ್ಕೆ ಸಿಂಹಪಾಲು ನೀಡಿದೆ. ಕರ್ನಾಟಕಕ್ಕೆ ₹6,498 ಕೋಟಿ ಸಿಕ್ಕಿದೆ.

“ಅಭಿವೃದ್ಧಿ ಮತ್ತು ಬಂಡವಾಳ ವೆಚ್ಚವನ್ನು ಹೆಚ್ಚಿಸಲು ರಾಜ್ಯಗಳನ್ನು ಸಕ್ರಿಯಗೊಳಿಸುವ ಪ್ರಯತ್ನದಲ್ಲಿ,ರಾಜ್ಯ ಸರ್ಕಾರಗಳಿಗೆ ₹1,78,173 ಕೋಟಿ ರೂಪಾಯಿಗಳ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ” ಎಂದು  ಕೇಂದ್ರ ಸರ್ಕಾರ ಹೇಳಿದೆ.

ಅಕ್ಟೋಬರ್‌ನಲ್ಲಿ ಬಾಕಿ ಇರುವ ₹89,086.50 ಕೋಟಿ  ನಿಯಮಿತ ಕಂತಿನ ಜೊತೆಗೆ ಒಂದು ಮುಂಗಡ ಕಂತನ್ನೂ ಸಹ ಒಳಗೊಂಡಿದೆ.

ರಾಜ್ಯಗಳ ಪೈಕಿ ಉತ್ತರ ಪ್ರದೇಶ (₹31,962 ಕೋಟಿ), ಬಿಹಾರ (₹17,921 ಕೋಟಿ), ಮಧ್ಯಪ್ರದೇಶ (₹13,987 ಕೋಟಿ), ಮಹಾರಾಷ್ಟ್ರ (₹11,255 ಕೋಟಿ), ಪಶ್ಚಿಮ ಬಂಗಾಳ (₹13,404 ಕೋಟಿ), ರಾಜಸ್ಥಾನ (₹10,737 ಕೋಟಿ), ಒಡಿಶಾ (₹8,068 ಕೋಟಿ), ಆಂಧ್ರಪ್ರದೇಶ (₹7,211 ಕೋಟಿ) ಮತ್ತು ತೆಲಂಗಾಣ (₹3,745 ಕೋಟಿ) ರಾಜ್ಯಗಳು ಅತಿ ಹೆಚ್ಚು ಪಾಲು ಪಡೆದ ರಾಜ್ಯಗಳಾಗಿವೆ.

“ಈ ಬಿಡುಗಡೆಯು ಮುಂಬರುವ ಹಬ್ಬದ ಋತುವಿನ ದೃಷ್ಟಿಯಿಂದ ಮತ್ತು ರಾಜ್ಯಗಳು ಬಂಡವಾಳ ವೆಚ್ಚವನ್ನು ವೇಗಗೊಳಿಸಲು, ಅವುಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು” ಎಂದು ಕೇಂದ್ರ ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೇಂದ್ರ ಸರ್ಕಾರವು 2024-25ರ ಹಣಕಾಸು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ₹23,48,980 ಕೋಟಿಗಳನ್ನು ವರ್ಗಾಯಿಸಲಿದೆ. ಇದು 2023-24ರ ವಾಸ್ತವಕ್ಕಿಂತ ಶೇ.11.9ರಷ್ಟು ಹೆಚ್ಚಳವಾಗಿದೆ. ಕೇಂದ್ರದ ತೆರಿಗೆ ಆದಾಯದಿಂದ ರಾಜ್ಯಗಳಿಗೆ ವಿಕೇಂದ್ರೀಕರಣವು 2024-25 ರಲ್ಲಿ ₹12,47,211 ಕೋಟಿ ಎಂದು ಅಂದಾಜಿಸಲಾಗಿದೆ. ಇದು 2023-24 ರ ವಾಸ್ತವಿಕತೆಗಿಂತ 10.4 ಶೇಕಡಾ ಹೆಚ್ಚಳವಾಗಿದೆ. ವಾಸ್ತವಿಕ ಅಂಶಗಳ ಪ್ರಕಾರ 2023-24 ರಲ್ಲಿ, ರಾಜ್ಯಗಳ ವಿಕೇಂದ್ರೀಕರಣ ಮೊತ್ತವು ₹10,21,448 ಕೋಟಿ ಆಗಿದ್ದು, ಇದು ಬಜೆಟ್ ಅಂದಾಜಿಗಿಂತ (ಶೇ 10.6 ರಷ್ಟು ಹೆಚ್ಚಳ) ₹1,08,046 ಕೋಟಿ ಹೆಚ್ಚು ಎಂದು ಅಂದಾಜಿಸಲಾಗಿದೆ.

ಈ ವರ್ಷದ ಜೂನ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತೆರಿಗೆಗಳ ವಿಕೇಂದ್ರೀಕರಣದ ಹೆಚ್ಚುವರಿ ಕಂತನ್ನು ಬಿಡುಗಡೆ ಮಾಡಿತು. ಒಟ್ಟು ಮೊತ್ತವು ₹1,39,750 ಕೋಟಿ ಫೆಬ್ರವರಿಯಲ್ಲಿ ಕೇಂದ್ರವು ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ₹1.42 ಲಕ್ಷ ಕೋಟಿಳನ್ನು ಬಿಡುಗಡೆ ಮಾಡಿತ್ತು. ಅದೇ ತಿಂಗಳ ಹಿಂದೆ ವಿತರಿಸಲಾದ 72,961 ಕೋಟಿ ರೂಪಾಯಿಗಳಿಗೆ ಪೂರಕವಾಗಿದೆ.

ಕೇಂದ್ರ ಸರ್ಕಾರವು 2024-25ರಲ್ಲಿ ₹48,20,512 ಕೋಟಿಗಳನ್ನು ಖರ್ಚು ಮಾಡಲಿದೆ ಎಂದು ಅಂದಾಜಿಸಲಾಗಿದೆ. 2023-24ರ ವಾಸ್ತವಕ್ಕಿಂತ ಶೇ.8.5ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ; ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರತಿ ಗಲ್ಲಿಯೂ ಜಂತರ್ ಮಂತರ್..’; ಎಸ್‌ಐಆರ್‌ ವಿರುದ್ಧ ಅ.23ರಂದು ದೇಶಾದ್ಯಂತ ಪ್ರತಿಭಟನೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರನ್ನು ಸಂಸತ್ತಿನ ಮೂಲಕ ಪದಚ್ಯುತಗೊಳಿಸಬೇಕು ಹಾಗೂ "ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು" ಎಂದು ಆಗ್ರಹಿಸಿ "ಪೀಪಲ್‌...

SIR ಅಂತಿಮ ಪಟ್ಟಿಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳಲ್ಲಿ ಬದಲಾವಣೆ : ಯುಪಿಯಲ್ಲಿ ಮತಗಳ್ಳತನದ ಹೊಸ ಸಂಚು ಬೆಳಕಿಗೆ; ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಉತ್ತರ ಪ್ರದೇಶದ ಪಿಲಿಭಿತ್ ವಿಧಾನಸಭಾ ಕ್ಷೇತ್ರದ ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬುಧವಾರ (ಅಕ್ಟೋಬರ್ 21) ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸೂಚಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಮತದಾರರ ಗುರುತಿನ...

ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ ಮೆರವಣಿಗೆ; ಎಸ್‌ಐಆರ್ ವಿರೋಧಿ ಪ್ರತಿಭಟನೆ ನಿಮ್ಮೂರಲ್ಲೆಲ್ಲಿ ಗೊತ್ತಾ?

ಎಸ್ಐಆರ್ ರದ್ದುಪಡಿಸುವಂತೆ ಆಗ್ರಹಿಸಿ ಹಾಗೂ ನವದೆಹಲಿಯ 'ಜಂತರ್ ಮಂತರ್' ಮೈದಾನದಲ್ಲಿ ಪ್ರತಿಭಟನೆ ಮಾಡದಂತೆ ನಿರ್ಬಂಧಿಸಿರುವ ದೆಹಲಿ ಪೊಲೀಸರ ಪ್ರಜಾಪ್ರಭುತ್ವ ವಿರೋಧಿ ನಿಲುವು ಖಂಡಿಸಿ ದೇಶದಾದ್ಯಂತ ಜನಪರ ಸಂಘಟನೆಗಳು ಏಕಕಾಲದಲ್ಲಿ 'ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ...

‘ಯುದ್ಧದ ಮುಂಚೂಣಿ ರೇಖೆಗಳ ಸ್ಥಗಿತಕ್ಕೆ ಸಿದ್ಧ..’; ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡಲು ಒಪ್ಪಿದರೇ ಝೆಲೆನ್‌ಸ್ಕಿ?

ರಷ್ಯಾದೊಂದಿಗಿನ ಶಾಂತಿ ಒಪ್ಪಂದದ ಭಾಗವಾಗಿ ಪ್ರಸ್ತುತ ಯುದ್ಧದ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸಲು ಸಿದ್ಧವಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. 2022ರ ಫೆಬ್ರವರಿಯಲ್ಲಿ ಆರಂಭವಾದ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ...

ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಭಾರತೀಯ ಪ್ರಜೆ, ಮತ್ತೊಬ್ಬರು ಸೌದಿ ಪ್ರಜೆ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ...

ಸಿಇಸಿ ಗ್ಯಾನೇಶ್ ಕುಮಾರ್ ಸಹೋದರನ ನೇತೃತ್ವದ ದೆಹಲಿ ಕಸ್ಟಮ್ಸ್‌ನಲ್ಲಿ ಪಂಜಾಬ್‌ ಮುಖ್ಯಮಂತ್ರಿಯನ್ನು ತಡೆದು ದಂಡ ವಿಧಿಸಲಾಯಿತೇ?

ಪ್ರಸ್ತುತ ಇಡೀ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಸಹೋದರ ಮನೀಶ್ ಕುಮಾರ್ ಮುಖ್ಯ ಆಯುಕ್ತರಾಗಿರುವ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ...

ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್...

ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು...

ಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ಜೀವನ ನಿರ್ವಹಣಾ ವೆಚ್ಚದ ಏರಿಕೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಿಗೆ ತಿರುಗಿದ ಹಿನ್ನೆಲೆಯಲ್ಲಿ, ಪಶ್ಚಿಮ ಯುರೋಪಿಯನ್ ದೇಶದಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುತ್ತಿರುವ ತಮ್ಮ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು...