Homeಮುಖಪುಟಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ

- Advertisement -
- Advertisement -

ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದು ಪ್ರಸ್ತುತ ಜಾರಿಯಲ್ಲಿರುವ ₹5,000 ಬಹುಮಾನಕ್ಕಿಂತ ಐದು ಪಟ್ಟು ಹೆಚ್ಚಿಸಲಾಗಿದೆ.

ನಟ ಅನುಪಮ್ ಖೇರ್ ಅವರೊಂದಿಗೆ ನಾಗ್ಪುರದಲ್ಲಿ ರಸ್ತೆ ಸುರಕ್ಷತೆಯ ಕುರಿತಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಅಪಘಾತದ ನಿರ್ಣಾಯಕ ಮೊದಲ ಗಂಟೆಯಲ್ಲಿ ರಸ್ತೆ ಅಪಘಾತದ ಬಲಿಪಶುಗಳನ್ನು ಆಸ್ಪತ್ರೆಗಳಿಗೆ ತಲುಪಿಸುವ ವ್ಯಕ್ತಿಗೆ ಪ್ರಸ್ತುತ ಬಹುಮಾನ ಸಾಕಾಗುವುದಿಲ್ಲ ಎಂದು ಹೇಳಿದರು.

ಅಪಘಾತಗಳಲ್ಲಿ ಗಾಯಗೊಂಡ ಜನರಿಗೆ ಮೊದಲ ಏಳು ದಿನಗಳವರೆಗೆ ಸರ್ಕಾರವು ₹1.5 ಲಕ್ಷಗಳವರೆಗಿನ ಆಸ್ಪತ್ರೆ ವೆಚ್ಚವನ್ನು ಭರಿಸುತ್ತದೆ. ಈ ಯೋಜನೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಾಯಗೊಂಡವರಿಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯ ಹೆದ್ದಾರಿಗಳಲ್ಲಿ ಗಾಯಗೊಂಡ ಜನರಿಗೆ ಸಹ ಅನ್ವಯಿಸುತ್ತದೆ” ಎಂದು ಅವರು ಹೇಳಿದರು.

ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವವರಿಗೆ ಬಹುಮಾನ ನೀಡುವ ಯೋಜನೆಯನ್ನು ಅಕ್ಟೋಬರ್ 2021 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯ ಪ್ರಕಾರ, ಮಾರಣಾಂತಿಕ ಅಪಘಾತಕ್ಕೊಳಗಾದವರ ಜೀವವನ್ನು ತಕ್ಷಣದ ಸಹಾಯವನ್ನು ಒದಗಿಸುವ ಮೂಲಕ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಗೋಲ್ಡನ್ ಅವರ್ (ಅಪಘಾತದ ನಂತರದ ಮೊದಲ ಗಂಟೆ) ಒಳಗೆ ಆಸ್ಪತ್ರೆಗೆ ಸಾಗಿಸುವ ಮೂಲಕ ಉಳಿಸುವ ಜನರಿಗೆ ಬಹುಮಾನ ನೀಡಲಾಗುತ್ತದೆ.

“ಒಳ್ಳೆಯ ನಂಬಿಕೆಯಿಂದ, ಹಣ ಅಥವಾ ಪ್ರತಿಫಲದ ನಿರೀಕ್ಷೆಯಿಲ್ಲದೆ ಮತ್ತು ಯಾವುದೇ ಆರೈಕೆಯ ಕರ್ತವ್ಯ ಅಥವಾ ವಿಶೇಷ ಸಂಬಂಧವಿಲ್ಲದೆ, ಅಪಘಾತ ಅಥವಾ ತುರ್ತು ವೈದ್ಯಕೀಯ ಸ್ಥಿತಿ ಅಥವಾ ತುರ್ತು ಪರಿಸ್ಥಿತಿಯಲ್ಲಿ ಗಾಯಗೊಂಡ ವ್ಯಕ್ತಿಗೆ ತಕ್ಷಣದ ಸಹಾಯ ಅಥವಾ ತುರ್ತು ಆರೈಕೆಯನ್ನು ನೀಡಲು ಸ್ವಯಂಪ್ರೇರಣೆಯಿಂದ ಮುಂದೆ ಬರುವ ವ್ಯಕ್ತಿಗೆ” ಹಣ ನೀಡಲಾಗುತ್ತದೆ ಎಂದು ಈ ಯೋಜನೆ ವ್ಯಾಖ್ಯಾನಿಸುತ್ತದೆ.

ಇದನ್ನೂ ಓದಿ; ‘ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ವಂತವಾಗಿ ಹೋರಾಡಲು ಸಾಧ್ಯವಿಲ್ಲ..’;  ‘ಕೈ’ ವಿರುದ್ಧ ಸಾಮ್ನಾ ಸಂಪಾದಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...